India vs England 1st ODI: ಭಾರತ ಮತ್ತು ಇಂಗ್ಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಇಂದು ನಡೆಯಲಿದೆ. ಉಭಯ ತಂಡಗಳು ಮುಖಾಮುಖಿಯಾಗುತ್ತಿರುವ ಈ ಪಂದ್ಯಕ್ಕೆ ನಾಗ್ಪುರ್ ಮೈದಾನ ಆತಿಥ್ಯ ವಹಿಸಿಕೊಳ್ಳಲಿದೆ.
ಈಗಾಗಲೇ 5 ಪಂದ್ಯಗಳ ಟಿ20 ಸರಣಿಯಲ್ಲಿ ಆಂಗ್ಲರನ್ನು 4-1 ಅಂತರದಿಂದ ಮಣಿಸಿ ಸರಣಿ ವಶಪಡಿಸಿಕೊಂಡಿರುವ ಭಾರತ ಇದೀಗ ಏಕದಿನ ಸರಣಿ ಮೇಲೂ ಕಣ್ಣಿಟ್ಟಿದೆ. 15 ತಿಂಗಳು ಬಳಿಕ ಇದೇ ಮೊದಲ ಬಾರಿಗೆ ಎರಡೂ ತಂಡಗಳು ಏಕದಿನ ಪಂದ್ಯ ಆಡುತ್ತಿವೆ. ಮೊದಲ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡ ಪ್ರಕಟವಾಗಿದೆ.
ರೂಟ್ ಕಮ್ಬ್ಯಾಕ್:14 ತಿಂಗಳ ಬಳಿಕ ಇಂಗ್ಲೆಂಡ್ನ ಸ್ಟಾರ್ ಬ್ಯಾಟರ್ ಜೋ ರೂಟ್ ಏಕದಿನ ಪಂದ್ಯಕ್ಕೆ ಮರಳಿದ್ದಾರೆ. ಅವರು ಕೊನೆಯ ಬಾರಿಗೆ ನವೆಂಬರ್ 11, 2023 ರಂದು ಈಡನ್ ಗಾರ್ಡನ್ಸ್‌ನಲ್ಲಿ ನಡೆದಿದ್ದ ಪಾಕಿಸ್ತಾನ ವಿರುದ್ಧ ಏಕದಿನ ವಿಶ್ವಕಪ್ನಲ್ಲಿ ಆಡಿದ್ದರು. ಆ ಬಳಿಕ ರೂಟ್ ಟೆಸ್ಟ್ ಪಂದ್ಯಗಳಲ್ಲಿ ಬ್ಯುಸಿ ಆಗಿದ್ದರು.
ಶಮಿ ಕಮ್ಬ್ಯಾಕ್:ಮೊಹಮ್ಮದ್ ಶಮಿ ಕೂಡ 2023ರ ಏಕದಿನ ವಿಶ್ವಕಪ್ ಬಳಿಕ ಕ್ರಿಕೆಟ್ನಿಂದ ದೂರ ಉಳಿದಿದ್ದರು. ಸದ್ಯ, ಟಿ-20 ಸರಣಿ ಮೂಲಕ ಕಮ್ಬ್ಯಾಕ್ ಮಾಡಿರುವ ಅವರು ಇಂದು ಏಕದಿನ ಪಂದ್ಯದಲ್ಲೂ ಆಡುವ ಸಾಧ್ಯತೆ ಇದೆ.
ಹೆಡ್ ಟು ಹೆಡ್:ಭಾರತ ಮತ್ತು ಇಂಗ್ಲೆಂಡ್ ನಡುವೆ ಒಟ್ಟು 107 ಏಕದಿನ ಪಂದ್ಯಗಳು ನಡೆದಿವೆ. ಇವುಗಳಲ್ಲಿ ಭಾರತ 58 ಪಂದ್ಯಗಳನ್ನು ಗೆದ್ದಿದ್ದರೆ, ಇಂಗ್ಲೆಂಡ್ 44 ಬಾರಿ ಗೆಲುವು ಸಾಧಿಸಿದೆ. 3 ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡರೆ, 2 ಪಂದ್ಯಗಳು ರದ್ದಾಗಿವೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಭಾರತ ಈ ವರೆಗೆ 6 ಏಕದಿನ ಪಂದ್ಯಗಳನ್ನು ಆಡಿದ್ದು, ಅವುಗಳಲ್ಲಿ ನಾಲ್ಕರಲ್ಲಿ ಗೆದ್ದು ಎರಡರಲ್ಲಿ ಸೋತಿದೆ.
IND vs ENG ODI ನೇರಪ್ರಸಾರ ಮತ್ತು ಲೈವ್ ಸ್ಟ್ರೀಮಿಂಗ್ ವಿವರ