ಭಾರತ ಮತ್ತು ಇಂಗ್ಲೆಂಡ ನಡುವೆ 5 ಪಂದ್ಯಗಳ ಟಿ-20 ಸರಣಿ ನಾಳೆಯಿಂದ ಪ್ರಾರಂಭವಾಗಲಿದೆ. ಕೋಲ್ಕಾತ್ತಾದ ಈಡೆನ್ ಗಾರ್ಡನ್ನಲ್ಲಿ ಉಭಯ ತಂಡಗಳ ನಡುವೆ ಮೊದಲ ಪಂದ್ಯ ನಡೆಯಲಿದೆ. ಪಂದ್ಯಕ್ಕೂ ಒಂದು ದಿನ ಮುನ್ನವೇ ಇಂಗ್ಲೆಂಡ್ 11 ಆಟಗಾರರ ಅಂತಿಮ ತಂಡವನ್ನು ಪ್ರಕಟಿಸಿದೆ.
ಇಂಗ್ಲೆಂಡ್ ಬ್ಯಾಟಿಂಗ್ ವಿಭಾಗ ತುಂಬಾ ಬಲಿಷ್ಠವಾಗಿದ್ದು, 6 ಟಿ-20 ಸ್ಪೇಷಲಿಷ್ಟ್ ಗಳನ್ನು ತಂಡಕ್ಕೆ ಸೇರಿಸಲಾಗಿದೆ. ಬೆನ್ ಡಕೆಟ್ ಮತ್ತು ಫಿಲ್ ಸಾಲ್ಟ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದು, ನಾಯಕ ಜೋಸ್ ಬಟ್ಲರ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬರಲಿದ್ದಾರೆ.
ಮಧ್ಯಮ ಕ್ರಮಾಂಕದಲ್ಲಿ ಹ್ಯಾರಿ ಬ್ರೂಕ್, ಜಾಕೋಭ್ ಬೆಥೆಲ್, ಲಿವಿಂಗ್‌ಸ್ಟನ್ ಕಾಣಿಸಿಕೊಳ್ಳಿದ್ದಾರೆ. ಆಲ್‌ರೌಂಡರ್ ಜೇಮಿ ಓವರ್ಟನ್ ಕೂಡ ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬರಲಿದ್ದಾರೆ. ಈ ತಂಡವನ್ನು ಗಮನಿಸಿದರೇ ಈಡನ್ ಗಾರ್ಡನ್ನಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಕಠಿಣ ಪೈಪೋಟಿ ಏರ್ಪಡುವ ಸಾಧ್ಯತೆ ಹೆಚ್ಚಾಗಿದೆ.
ಏತನ್ಮಧ್ಯೆ, ಡೇಂಜರಸ್ ಬೌಲರ್ ಜೋಫ್ರಾ ಆರ್ಚರ್ ಮತ್ತು ಮಾರ್ಕ್ ವುಡ್ ಕೂಡ ಆಡುವ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಜೋಫ್ರಾ ಆರ್ಚರ್ ಕೊನೆಯ ಬಾರಿಗೆ 20 ಮಾರ್ಚ್ 2021 ರಂದು ಭಾರತ ವಿರುದ್ಧ ನಡೆದಿದ್ದ T20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಪ್ರತಿನಿಧಿಸಿದರು. ಇದೀಗ 4 ವರ್ಷಗಳ ನಂತರ ಭಾರತಕ್ಕೆ ಕಾಲಿಟ್ಟಿದ್ದಾರೆ. ಲೈನ್ ಮತ್ತು ಲೆಂಥ್ ಬೌಲಿಂಗ್ಗೆ ಹೆಸರುವಾಸಿಯಾಗಿರುವ ಅರ್ಚರ್ ನಾಳೆ ಪಂದ್ಯದಲ್ಲಿ ಭಾರತೀಯ ಆಟಗಾರರಿಗೆ ಸಮಸ್ಯೆ ಒಡ್ಡುವ ಸಾಧ್ಯತೆ ಇದೆ.