IND vs ENG 2nd T20I: ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ T20I ಸರಣಿಯು ಜನವರಿ 22 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ ಸ್ಟೇಡಿಯಂನಲ್ಲಿ ನಡೆದ ಸರಣಿಯ ಮೊದಲ ಪಂದ್ಯದೊಂದಿಗೆ ಪ್ರಾರಂಭಗಿವಾಗಿದೆ.
ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡ ಮೊದಲ ಪಂದ್ಯದಲ್ಲಿ ಆಂಗ್ಲರ ವಿರುದ್ಧ 7 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಸರಣಿಯಲ್ಲಿ 1–0 ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಇದೀಗ ಉಭಯ ತಂಡಗಳ ನಡುವಿನ ಸರಣಿಯ ಎರಡನೇ ಪಂದ್ಯ ಶನಿವಾರ (ಇಂದು) ಚೆನ್ನೈನ ಎಂಎ ಚಿದಂಬರಂ ಮೈದಾನದಲ್ಲಿ ನಡೆಯಲಿದೆ. ಇದಕ್ಕಾಗಿ ಎರಡೂ ತಂಡಗಳು ಸಿದ್ಧತೆ ನಡೆಸಿವೆ. ಮೊದಲ ಪಂದ್ಯದಲ್ಲಿ ಸೋಲನುಭವಿಸಿರುವ ಇಂಗ್ಲೆಂಡ್ ಈ ಪಂದ್ಯದಲ್ಲಿ ಗೆದ್ದು ಸರಣಿ ಸಮಬಲ ಸಾಧಿಸುವ ಗುರಿ ಹೊಂದಿದೆ.
ಎಂಎ ಚಿದಂಬರಂ ವರದಿ:ಚೆಪಾಕ್ ಮೈದಾನವೂ ಬೌಲರ್ ಸ್ನೇಹಿಯಾಗಿದ್ದು ಇಲ್ಲಿ ಸ್ಪಿನ್ನರ್ಗಳು ಹೆಚ್ಚಿನ ಲಾಭ ಪಡೆಯುತ್ತಾರೆ. ಈ ಮೈದಾನದಲ್ಲಿ ಮೊದಲ ಇನಿಂಗ್ಸ್ನ ಸರಾಸರಿ ಸ್ಕೋರ್ 150 ಆಗಿದ್ದು, ಎರಡನೇ ಇನಿಂಗ್ಸ್ನ ಸ್ಕೋರ್ 122 ಆಗಿದೆ. ಇಲ್ಲಿ ಒಟ್ಟು 9 ಟಿ20 ಪಂದ್ಯಗಳು ನಡೆದಿದ್ದು ಇದರಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ 6 ಬಾರಿ ಗೆಲುವು ಸಾಧಿಸಿದ್ದರೇ, ಚೇಸಿಂಗ್ ತಂಡಗಳು ಕೇವಲ ಎರಡು ಮಾಡಿ ಮಾತ್ರ ಪಂದ್ಯದಲ್ಲಿ ಗೆಲುವು ಸಾಧಿಸಿವೆ. ಹಾಗಾಗಿ ಇಂದಿನ ಮ್ಯಾಚ್ನಲ್ಲಿ ಟಾಸ್ ಪ್ರಮುಖ ಪಾತ್ರ ವಹಿಸಲಿದೆ. ಚೆಪಾಕ್ ಮೈದಾನದಲ್ಲಿ ದಾಖಲಾದ ಹೈಸ್ಕೋರ್ 189 ಆಗಿದ್ದು ಲೋ ಸ್ಕೋರ್ 80 ಆಗಿದೆ.
ಭಾರತ-ಇಂಗ್ಲೆಂಡ್ ಹೆಡ್ ಟು ಹೆಡ್ ದಾಖಲೆ:ಭಾರತ ಮತ್ತು ಇಂಗ್ಲೆಂಡ್ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟು 25 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಹೆಚ್ಚು ಪಂದ್ಯ ಗೆದ್ದುಪ್ರಾಬಲ್ಯ ಸಾಧಿಸಿದೆ. ಟೀಂ ಇಂಡಿಯಾ 14 ಪಂದ್ಯಗಳನ್ನು ಗೆದ್ದುಕೊಂಡರೇ, ಇಂಗ್ಲೆಂಡ್ 11 ಪಂದ್ಯಗಳಲ್ಲಿ ಗೆಲ್ಲವು ಸಾಧಿಸಿದೆ.