Rohit Sharma RCB 17ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನವೇ ಭಾರೀ ಕುತೂಹಲ ಕೆರಳಿಸಿದೆ. ಕಾರಣ ಕೆಲ ಸ್ಟಾರ್ ಆಟಗಾರರು ತಮ್ಮ ಹಾಲಿ ತಂಡಗಳನ್ನು ತೊರೆದು ಬೇರೊಂದು ತಂಡಕ್ಕೆ ಸೇರಲಿದ್ದಾರೆ ಎಂಬ ಮಾತುಗಳು ಹರಿದಾಡಲಾರಂಭಿಸಿವೆ. ಅದರಲ್ಲೂ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಿವೆ. ಐಪಿಎಲ್ 2025ರಲ್ಲಿ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಯಾವ ತಂಡವನ್ನು ಪ್ರತಿನಿಧಿಸಲಿದ್ದಾರೆ, ಪ್ರಸ್ತುತ ಫ್ರಾಂಚೈಸಿ ಮುಂಬೈ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುತ್ತದೋ ಅಥವಾ ಹರಾಜಿಗೆ ಬಿಡುವುದೇ ಎಂಬಿತ್ಯಾದಿ ಚರ್ಚೆಗಳು ದಿನೇ ದಿನೇ ಹೆಚ್ಚಾಗತೊಡಗುತ್ತಿವೆ.
ಕಳೆದ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡ ರೋಹಿತ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯ ಅವರಿಗೆ ತಂಡ ಮುನ್ನಡೆಸುವ ಜವಾಬ್ದಾರಿ ನೀಡಲಾಗಿತ್ತು. ಇದರಿಂದಾಗಿ ರೋಹಿತ್ ಶರ್ಮಾ ಅವರ ಅಭಿಮಾನಿಗಳು ಕೂಡ ತುಂಬಾ ನೊಂದಿದ್ದರು. ಈ ಕಾರಣದಿಂದಾಗಿ ಹಿಟ್ಮ್ಯಾನ್ ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರೆ ಎಂದು ಸುದ್ದಿಗಳು ಹರಿದಾಡಲಾರಂಭಿಸಿವೆ.
ಇದನ್ನೂ ಓದಿ:ಮುಂಬೈ ತೊರೆದು ಆರ್‌ಸಿಬಿ ಸೇರ್ತಾರಾ ಸ್ಪೋಟಕ ಬ್ಯಾಟರ್?: ಇವರು ಬಂದ್ರೆ 'ಈ ಸಲ್ ಕಪ್ ನಮ್ದೆ'!
ಇದರ ನಡುವೆಯೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆರ್‌ಸಿಬಿ ಅಭಿಮಾನಿಗಳು ಹಿಟ್ಮ್ಯಾನ್ಗೆ ಬೇಡಿಕೆಯೊಂದನ್ನು ಇಟ್ಟಿದ್ದಾರೆ. ಟೆಸ್ಟ್ ಪಂದ್ಯದ ಮಧ್ಯದಲ್ಲಿ ರೋಹಿತ್ ಡ್ರೆಸ್ಸಿಂಗ್ ರೂಮ್‌ಗೆ ಹೋಗುವಾಗ ನೆರೆದಿದ್ದ ಅಭಿಮಾನಿಗಳು, "ಮುಂದಿನ ವರ್ಷ ಐಪಿಎಲ್ನಲ್ಲಿ ಯಾವ ತಂಡದ ಪರ ಆಡುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಹಿಟ್ಮ್ಯಾನ್, ನಾನು ಯಾವ ತಂಡದಲ್ಲಿ ಆಡಲು ಬಯಸುತ್ತೀರಿ ಹೇಳಿ ಎಂದಿದ್ದಾರೆ. ಅದಕ್ಕೆ ಅಭಿಮಾನಿಗಳು, ನೀವು ಆರ್‌ಸಿಬಿ ತಂಡಕ್ಕೆ ಬನ್ನಿ ಎಂದು ಕೇಳಿಕೊಂಡಿದ್ದಾರೆ. ಇದಕ್ಕೆ ರೋಹಿತ್ ಮಗುಳ್ನಗುತ್ತ ಅಭಿಮಾನಿಗಳತ್ತ ಕೈ ಬೀಸುತ್ತಾ ಡ್ರೆಸ್ಸಿಂಗ್ ರೂಮ್‌ಗೆ ತೆರಳಿದರು.
ಏತನ್ಮಧ್ಯೆ, ಮುಂಬೈ ಫ್ರಾಂಚೈಸಿ ರೋಹಿತ್ ಶರ್ಮಾ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲು ಒಲವು ತೋರುತ್ತಿದೆ ಎನ್ನಲಾಗುತ್ತಿದೆ. ರೋಹಿತ್ ಜೊತೆಗೆ ವೇಗಿ ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯರನ್ನೂ ತಂಡದಲ್ಲಿ ಉಳಿಸಿಕೊಳ್ಳುವ ಯೋಚನೆಯಲ್ಲಿದೆ ಎಂದು ವರದಿಯಾಗಿದೆ. ರೈಟ್ ಟು ಮ್ಯಾಚ್ ಕಾರ್ಡ್ ಮೂಲಕ ತಿಲಕ್ ವರ್ಮಾ ಅವರನ್ನೂ ಉಳಿಸಿಕೊಳ್ಳುವ ಸಾಧ್ಯತೆ ಇದೆ.
ಇದನ್ನೂ ಓದಿ:ಪಿಚ್ನಲ್ಲಿ ಜಿಗಿದಾಡಿ ಪಂತ್ ರನ್ಔಟ್ ಆಗುವುದನ್ನು ತಡೆದ ಸರ್ಫರಾಜ್ ಖಾನ್: ಫನ್ನಿ ವಿಡಿಯೋ ವೈರಲ್