IND vs SA 4th T20:ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟಿ20 ಸರಣಿಯ ನಾಲ್ಕನೇ ಮತ್ತು ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿ ವಶಪಡಿಸಿಕೊಂಡಿದೆ.
ಜೋಹಾನ್ಸ್ಬರ್ಗ್ನ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಟೀಂ ಇಂಡಿಯಾ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಬ್ಯಾಟಿಂಗ್ ನೆರವಿನಿಂದ 283 ರನ್ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡವು ಭಾರತದ ಮಾರಕ ಬೌಲಿಂಗ್ ದಾಳಿಗೆ ಸಿಲುಕಿ 148 ರನ್ಗಳಿಗೆ ಸರ್ವಪತನ ಕಂಡಿತು. ಟ್ರಿಸ್ಟನ್ ಸ್ಟಬ್ಸ್ (43) ಮತ್ತು ಡೆವಿಡ್ ಮಿಲ್ಲರ್ (36), ಜಾನ್ಸೆನ್ (29), ಕೊಯಿಟ್ಝೆ (12) ಹೊರತುಪಡಿಸಿ ಉಳಿದ ಬ್ಯಾಟರ್ಗಳು ಎರಡಂಕಿ ಕಲೆಹಾಕಲು ಸಾಧ್ಯವಾಗದೇ ಪೆವಿಲಿಯನ್ ಸೇರಿದರು. ಇದರಿಂದಾಗಿ ಟೀಂ ಇಂಡಿಯಾ 135 ರನ್ಗಳಿಂದ ಗೆಲುವು ಸಾಧಿಸಿತು.
ಭಾರತದ ಪರ ಅರ್ಷದೀಪ್ 3 ವಿಕೆಟ್ ಉರುಳಿಸಿದರೆ, ವರುಣ್ ಚಕ್ರವರ್ತಿ, ಅಕ್ಷರ್ ಪಟೇಲ್ ತಲಾ 2, ಹಾರ್ದಿಕ್ ಪಾಂಡ್ಯ, ಬಿಷ್ಣೋಯಿ, ರಮಣ್ದೀಪ್ ಸಿಂಗ್ ತಲಾ 1 ವಿಕೆಟ್ ಪಡೆದು ಮಿಂಚಿದರು. ಯುವ ಬ್ಯಾಟರ್ ತಿಲಕ್ ವರ್ಮಾ ಅತ್ಯುತ್ತಮ ಪ್ರದರ್ಶನ ತೋರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಇದರೊಂದಿಗೆ ಟೀಂ ಇಂಡಿಯಾ ಒಂದೇ ಪಂದ್ಯದಲ್ಲಿ 9 ದಾಖಲೆಗಳನ್ನು ಬರೆದಿದೆ.
9 ದಾಖಲೆ ಬರೆದ ಟೀಂ ಇಂಡಿಯಾ
283 ರನ್-ದಕ್ಷಿಣ ಆಫ್ರಿಕಾ ವಿರುದ್ಧ ಟಿ20ಯಲ್ಲಿ ಅತ್ಯಧಿಕ ಮೊತ್ತ ದಾಖಲಿಸಿದ ಮೊದಲ ತಂಡ. ಮತ್ತು T20I ನಲ್ಲಿ ಭಾರತದ ಎರಡನೇ ಅತಿ ಹೆಚ್ಚು ಸ್ಕೋರ್.
ಬೃಹತ್ ಅಂತರದ ಗೆಲುವು:ದಕ್ಷಿಣ ಆಫ್ರಿಕಾ ವಿರುದ್ಧ 135 ರನ್ಗಳ ಅಂತರದಿಂದ ಗೆಲುವು ಸಾಧಿಸಿದ ಮೊದಲ ತಂಡವಾಗಿ ಟೀಂ ಇಂಡಿಯಾ ದಾಖಲೆ.
23 ಸಿಕ್ಸರ್ಗಳು:ಭಾರತ ತಂಡ ಟಿ20 ಇನ್ನಿಂಗ್ಸ್ ವೊಂದರಲ್ಲೇ ಅತಿ ಹೆಚ್ಚು ಸಿಕ್ಸರ್‌ಗಳನ್ನು ಹೊಡೆದ ದಾಖಲೆ (23) ಬರೆಯಿತು.