ಹೈದರಾಬಾದ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಬೆಂಗಳೂರಿನ ಎಮ್. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಇದರಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು.
ಮೊದಲ ಪಂದ್ಯದಲ್ಲಿ ಭಾರತ ಪ್ಲೇಯಿಂಗ್ 11ರಲ್ಲಿ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ಇದರಲ್ಲಿ ಶುಭಮನ್ ಗಿಲ್ ಮತ್ತು ಆಕಾಶ್ ದೀಪ್ ಬದಲಿಗೆ ಸರ್ಫರಾಜ್ ಖಾನ್ ಮತ್ತು ಕುಲ್ದೀಪ್ ಯಾದವ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಪಂದ್ಯದ ಮೊದಲ ದಿನ ಅಂದರೆ ಬುಧವಾರ (ನಿನ್ನೆ) ನಿರಂತರ ಮಳೆಯಿಂದಾಗಿ ಟಾಸ್ ಮಾಡದೇ ಪಂದ್ಯ ರದ್ದುಗೊಳಿಸಲಾಗಿತ್ತು. ಈ ಕಾರಣಕ್ಕೆ ಇಂದು 98 ಓವರ್ಗಳ ಪಂದ್ಯವನ್ನು ನಡೆಸಲಾಗುತ್ತಿದೆ.
ಹವಾಮಾನ ವರದಿ:ಇಂದು ಬೆಂಗಳೂರಿನಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಯಾವುದೇ ಮಳೆಯ ಮುನ್ಸೂಚನೆಯಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ನಂತರ ಮಳೆಯ ಮಟ್ಟವು ಶೇಕಡಾ 45-50ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಪ್ರಕಾರ ಬೆ.11:00 AM ನಿಂದ 12:00ವರೆಗೆ ಅಂದರೆ ಒಂದು ಗಂಟೆ ಕಾಲ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಸಂಜೆ 5:00 ಗಂಟೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.