ರಾಜ್‌ಕೋಟ್:ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ನಲ್ಲಿ ಭಾರತ 434 ರನ್‌ಗಳ ಗೆಲುವು ಸಾಧಿಸಿದೆ. ಇದು ಟೆಸ್ಟ್ ಇತಿಹಾಸದಲ್ಲೇ ಭಾರತದ ಅತಿ ದೊಡ್ಡ ಅಂತರದ ಗೆಲುವಾಗಿದೆ.
ರಾಜ್‌ಕೋಟ್‌ನ ಸೌರಾಷ್ಟ್ರ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 445 ರನ್ ಗಳಿಸಿತ್ತು. ಇದಾದ ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿ 430 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡು 557 ರನ್‌ಗಳ ಗುರಿ ನೀಡಿತ್ತು. ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 319 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 122 ರನ್ ಗಳಿಸಿ ಸರ್ವಪತನ ಕಾಣುವ ಮೂಲಕ ಸೋಲನುಭವಿಸಿತು. ಅಲ್ಲದೆ ಇದು ಇಂಗ್ಲೆಂಡ್‌ನ ಎರಡನೇ ಅತಿ ದೊಡ್ಡ ಅಂತರದ ಸೋಲಾಗಿದೆ. ಇದಕ್ಕೂ ಮೊದಲು ಆಸ್ಟ್ರೇಲಿಯಾ ವಿರುದ್ದ 562 ರನ್ಗಳಿಂದ ಸೋಲನ್ನು ಕಂಡಿದ್ದರು. 5 ಟೆಸ್ಟ್ಗಳ ಸರಣಿಯಲ್ಲಿ ಭಾರತ 2-1 ಅಂತರದಿಂದ ಮುನ್ನಡೆ ಸಾಧಿಸಿದೆ.
ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತದ ಪರ ಜೈಸ್ವಾಲ್ ಅಜೇಯವಾಗಿ ದ್ವಿಶತಕ ಸಿಡಿಸಿದರೇ, ಶುಭಮನ್ ಗಿಲ್9 ರನ್ಗಳಿಂದ ಶತಕ ವಂಚಿತರಾದರು. ಬೌಲಿಂಗ್ನಲ್ಲಿ ಭಾರತದ ಪರ ರವೀಂದ್ರ ಜಡೇಜಾ 5, ಕುಲದೀಪ್ ಯಾದವ್ 2 ವಿಕೆಟ್ ಪಡೆದರು. ಬುಮ್ರಾ ಮತ್ತು ಅಶ್ವಿನ್ ತಲಾ ಒಂದು ವಿಕೆಟ್ ಪಡೆದು ತಂಡದ ಗೆಲುವಿಗೆ ಕೊಡುಗೆ ನೀಡಿದರು.
ಟೆಸ್ಟ್ನಲ್ಲಿ ಭಾರತದ ದೊಡ್ಡ ಅಂತರದ ಗೆಲುವುಗಳು