WTC Points Table: ಇಂಗ್ಲೆಂಡ್ ವಿರುದ್ಧದ ತವರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋಲನ್ನು ಕಂಡಿರುವ ಪಾಕಿಸ್ತಾನ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಅಂಕಪಟ್ಟಿಯಲ್ಲೂ ಪಾತಾಳಕ್ಕೆ ಕುಸಿದಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಕ್ಕೂ ಮೊದಲ 19.05 ಶೇಕಡಾ ಅಂಕದೊಂದಿಗೆ ಎಂಟನೇ ಸ್ಥಾನದಲ್ಲಿದ್ದ ಪಾಕಿಸ್ತಾನ ಇದೀಗ 16.67 ಶೇಕಡಾ ಅಂಕದೊಂದಿಗೆ ಒಂಬತ್ತನೇ ಸ್ಥಾನಕ್ಕೆ ಕುಸಿದಿದೆ.
ನಾಲ್ಕನೇ ಸ್ಥಾನದಲ್ಲಿ ಇಂಗ್ಲೆಂಡ್:ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಇಂಗ್ಲೆಂಡ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಯಾವುದೇ ಬದಲವಾಣೆಯಾಗದೇ ನಾಲ್ಕನೇ ಸ್ಥಾನದಲ್ಲೇ ಮುಂದುವರೆದಿದೆ. ಶೇಕಡ ಅಂಕದಲ್ಲಿ ಸ್ವಲ್ಪ ಬದಲಾವಣೆಯಾಗಿದ್ದ ಶೇ.42.19ರಿಂದ 45.59ಕ್ಕೆ ಏರಿಕೆಯಾಗಿದೆ.
2023-25 ಡಬ್ಲ್ಯೂಟಿಸಿ ಋತುವಿನಲ್ಲಿ, ಪಾಕಿಸ್ತಾನ ತಂಡವು ಒಟ್ಟು 8 ಪಂದ್ಯಗಳನ್ನು ಆಡಿದ್ದು ಇವುಗಳಲ್ಲಿ ಕೇವಲ ಎರಡರಲ್ಲಿ ಮಾತ್ರ ಗೆದ್ದಿದೆ. ಉಳಿದ ಆರು ಟೆಸ್ಟ್ ಪಂದ್ಯಗಳಲ್ಲಿ ಸೋಲನುಭವಿಸಿದೆ. ಮತ್ತೊಂದೆಡೆ, ಇಂಗ್ಲೆಂಡ್ ಈ ಋತುವಿನಲ್ಲಿ ಒಟ್ಟು 17ಪಂದ್ಯಗಳನ್ನು ಆಡಿದೆ. ಇದು ಇತರೆ ಯಾವುದೇ ತಂಡಗಳಿಗಿಂತ ಹೆಚ್ಚು ಟೆಸ್ಟ್ ಪಂದ್ಯಗಳಾಗಿದೆ. ಇದರಲ್ಲಿ ಒಂಬತ್ತುರಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದ 7 ಪಂದ್ಯಗಳಲ್ಲಿ ಸೋಲನುಭವಿಸಿದ್ದ ಒಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಇಂಗ್ಲೆಂಡ್ ಫೈನಲ್ ಪ್ರವೇಶಿಸಲು ಉಳಿದ ನಾಲ್ಕು ಪಂದ್ಯಗಳನ್ನು ಗೆಲ್ಲಲೇಬೇಕಿದೆ.