ನವದೆಹಲಿ: ಟೆಸ್ಟ್ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತದ ಮಹಿಳಾ ತಂಡವು ದಕ್ಷಿಣ ಆಫ್ರಿಕಾವನ್ನು 10 ವಿಕೆಟ್‌ಗಳಿಂದ ಜಯ ಸಾಧಿಸಿದೆ. ಸೋಮವಾರ 232/2 ಸ್ಕೋರ್‌ನೊಂದಿಗೆ ಎರಡನೇ ಇನ್ನಿಂಗ್ಸ್ (ಫಾಲೋ-ಆನ್) ಆರಂಭಿಸಿದ ದಕ್ಷಿಣ ಆಫ್ರಿಕಾ 373 ರನ್‌ಗಳಿಗೆ ಆಲೌಟ್ ಆಗಿತ್ತು. ಭಾರತಕ್ಕೆ 37 ರನ್‌ಗಳ ಗುರಿಯನ್ನು ನೀಡಿದೆ. ಈ ಗುರಿಯನ್ನು ಟೀಂ ಇಂಡಿಯಾ 9.2 ಓವರ್‌ಗಳಲ್ಲಿ ಪೂರ್ಣಗೊಳಿಸಿತು. ಶಫಾಲಿ ವರ್ಮಾ (24*) ಮತ್ತು ಶುಭಾ ಸತೀಶ್ (13) ರನ್ ಗಳಿಸಿದರು. ಈ ರೋಚಕ ಟೆಸ್ಟ್ ಪಂದ್ಯದಲ್ಲಿ ನಾಲ್ಕನೇ ದಿನದ ಮೂರನೇ ಸೆಷನ್‌ನಲ್ಲಿ ಭಾರತ ಗೆಲುವು ದಾಖಲಿಸಿದೆ.
ಶುಭಾ ಸತೀಶ್ ಅವರ ಅಜೇಯ 13 ರನ್ ಮತ್ತು ಶೆಫಾಲಿ ವರ್ಮಾ ಅವರ ಅಜೇಯ 24 ರನ್‌ಗಳ ನೆರವಿನಿಂದ ಭಾರತ 9.2 ಓವರ್‌ಗಳಲ್ಲಿ 10 ವಿಕೆಟ್‌ಗಳು ಉಳಿಸಿಕೊಂಡು ಈ ಗುರಿಯನ್ನು ಸಾಧಿಸಿತು. ದಕ್ಷಿಣ ಆಫ್ರಿಕಾ ವಿರುದ್ಧ ವಿಕೆಟ್‌ಗಳ ವಿಷಯದಲ್ಲಿ ಭಾರತಕ್ಕೆ ಅತಿ ದೊಡ್ಡ ಗೆಲುವು ಲಭಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 115.1 ಓವರ್‌ಗಳಲ್ಲಿ 603 ರನ್ ಗಳಿಸಿ ತನ್ನ ಮೊದಲ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ ತಂಡ ಮೊದಲ ಇನಿಂಗ್ಸ್‌ನಲ್ಲಿ 84.3 ಓವರ್‌ಗಳಲ್ಲಿ 266 ರನ್‌ಗಳಿಗೆ ಆಲೌಟ್ ಆಯಿತು.