ಕೋಲ್ಕತ್ತಾ: ಐಪಿಎಲ್ನ 47ನೇ ಪಂದ್ಯದಲ್ಲಿ ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಕೆಕೆಆರ್ ವಿರುದ್ದ ಟಾಸ್ ಗೆದ್ದಿರುವ ಡೆಲ್ಲಿ ನಾಯಕ ರಿಷಭ್ ಪಂತ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಡೆಲ್ಲಿ ತಂಡ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಕುಮಾರ್ ಕುಶಾಗ್ರಾ ಬದಲಿಗೆ ಪೃಥ್ವಿ ಶಾ, ಮುಕೇಶ್ ಕುಮಾರ್ ಬದಲಿಗೆ ರಾಸಿಖ್ ದಾರ್ ಸಲಾಂ ಅವರಿಗೆ ಅವಕಾಶ ನೀಡಲಾಗಿದೆ. ಕೋಲ್ಕತ್ತಾ ತಂಡ ಯಾವುದೇ ಬದಲಾವಣೆ ಮಾಡದೇ ಹಿಂದಿನ ಆಟಗಾರರೊಂದಿಗೆ ಕಣಕ್ಕಿಳಿದಿದೆ.
ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತ್ತಾ ಇದುವರೆಗೂ ಎಂಟು ಪಂದ್ಯಗಳನ್ನು ಆಡಿದ್ದು 5ರಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮತ್ತೊಂದೆಡೆ ಡೆಲ್ಲಿ 10 ಪಂದ್ಯಗಳಲ್ಲಿ ಐದರಲ್ಲಿ ಗೆದ್ದು ಆರನೇ ಸ್ಥಾನಕ್ಕೆ ತಲುಪಿದೆ.
ಹೆಡ್ ಟೂ ಹೆಡ್:ಎರಡೂ ತಂಡಗಳು ಒಟ್ಟು 33 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಕೋಲ್ಕತ್ತಾ 17 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಡೆಲ್ಲಿ 15 ಪಂದ್ಯಗಳಲ್ಲಿ ಗೆದ್ದಿದೆ. ಒಂದು ಪಂದ್ಯ ರದ್ದಾಗಿದೆ.