ಬೆಂಗಳೂರು:ಟಿ-20 ಕ್ರಿಕೆಟ್ನಲ್ಲಿ ವೆಸ್ಟ್ ಇಂಡೀಸ್ ಆಟಗಾರ ಸುನಿಲ್ ನರೈನ್ ಹೊಸ ದಾಖಲೆ ಬರೆದಿದ್ದಾರೆ. ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವಿರುದ್ಧ ಐಪಿಎಲ್ ಪಂದ್ಯದಲ್ಲಿ ಮೈದಾನಕ್ಕೆ ಇಳಿಯುವ ಮೂಲಕ 500 ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿ ಕೆರಿಬಿಯನ್ ಕ್ರಿಕೆಟಿಗ ತಮ್ಮ ಹೆಸರು ದಾಖಲಿಸಿದ್ದಾರೆ. ಅಲ್ಲದೇ, ಐನೂರು ಪಂದ್ಯಗಳಲ್ಲಿ ಕಾಣಿಸಿಕೊಂಡ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ಆರ್ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮುಖಿಯಾಗಿವೆ. ಕೆಕೆಆರ್ ಪರ ಆಲ್ರೌಂಡರ್ ಸುನಿಲ್ ನರೈನ್ ಮೈದಾನಕ್ಕೆ ಇಳಿದಿದ್ದಾರೆ. ನರೇನ್ ಐಪಿಎಲ್, ಬಿಗ್ ಬ್ಯಾಷ್ ಲೀಗ್ (ಬಿಬಿಎಲ್), ದಿ ಹಂಡ್ರೆಡ್ ಅಂಡ್ ಕೆರಿಬಿಯನ್ ಪ್ರೀಮಿಯರ್ ಲೀಗ್ (ಸಿಪಿಎಲ್)ನಂತಹ ಪ್ರಮುಖ ಲೀಗ್‌ಗಳು ಸೇರಿದಂತೆ ವಿಶ್ವದಾದ್ಯಂತ ವಿವಿಧ ಟಿ-20 ಟೂರ್ನಿಗಳನ್ನು ಆಡಿದ್ದಾರೆ.
ಐಪಿಎಲ್ನಲ್ಲಿ ಇಂದಿನ ಪಂದ್ಯವನ್ನು ಹೊರತುಪಡಿಸಿ ಕೆರಿಬಿಯನ್ ಆಟಗಾರ ನರೈನ್ ಒಟ್ಟಾರೆ 172 ಪಂದ್ಯಗಳನ್ನಾಡಿದ್ದಾರೆ. 158.46 ಸ್ಟ್ರೈಕ್ ರೇಟ್‌ನಲ್ಲಿ ನಾಲ್ಕು ಅರ್ಧಶತಕಗಳ ಸಮೇತ 1,048 ರನ್ ಬಾರಿಸಿದ್ದಾರೆ. ಅಲ್ಲದೇ, ಬೌಲಿಂಗ್ನಲ್ಲಿ 6.74 ಎಕಾನಮಿಯಲ್ಲಿ 182 ವಿಕೆಟ್‌ಗಳನ್ನು ಪಡೆದಿದ್ದಾರೆ. ಕೆರಿಬಿಯನ್ ಪ್ರೀಮಿಯರ್ ಲೀಗ್ (ಸಿಪಿಎಲ್)ನಲ್ಲೂ ನರೇನ್ ಕಾಣಿಸಿಕೊಂಡಿದ್ದು, ಇದು 50ಕ್ಕೂ ಹೆಚ್ಚು ಪಂದ್ಯಗಳನ್ನು ಅವರು ಆಡಿರುವ ಮತ್ತೊಂದು ಪಂದ್ಯಾವಳಿಯಾಗಿದೆ. ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡದ ಪರವಾಗಿ ಆಡಿರುವ ಈ ಸ್ಪಿನ್ನರ್ 79 ಪಂದ್ಯಗಳಲ್ಲಿ 80 ವಿಕೆಟ್‌ಗಳನ್ನು ಕಿತ್ತಿದ್ದಾರೆ.