IPL 2025 Mega Auction Place And Date:2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭಕ್ಕೂ ಮುನ್ನವೇ ಭಾರಿ ಕುತೂಹಲ ಕೆರಳಿಸಿದೆ. ಐಪಿಎಲ್ ಆಟಗಾರರ ಮೆಗಾ ಹರಾಜು ಇದಕ್ಕೆ ಕಾರಣ. ಅದರಲ್ಲೂ ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ರಂತಹ ಹಲವು ಸ್ಟಾರ್ ಕ್ರಿಕೆಟರ್ಗಳು ಹರಾಜಿನಲ್ಲಿದ್ದಾರೆ ಎಂದು ಈಗಾಗಲೇ ವರದಿಯಾಗಿದೆ.
ಮತ್ತೊಂದೆಡೆ ಮೆಗಾ ಹರಾಜಿಗೂ ಮೊದಲು, ಎಲ್ಲ ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಮತ್ತು ಬಿಡುಗಡೆಗೊಳಿಸಿದ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ನಿರತವಾಗಿವೆ. ಅಕ್ಟೋಬರ್ 31ರೊಳಗೆ ರಿಟೈನ್ ಆಟಗಾರರ ಪಟ್ಟಿ ಬಿಡುಗಡೆ ಮಾಡಬೇಕು ಎಂದು ಬಿಸಿಸಿಐ ಈಗಾಗಲೇ ತಿಳಿಸಿದೆ. ಇದರ ನಡುವೆ ಈ ಬಾರಿ ಮೆಗಾ ಹರಾಜು ಯಾವಾಗ ಮತ್ತು ಎಲ್ಲಿ ನಡೆಯಲಿದೆ ಎಂದು ಬಹಿರಂಗಗೊಂಡಿದೆ. ಕಳೆದ ಬಾರಿಯ ಹರಾಜು ಪ್ರಕ್ರಿಯೆ ದುಬೈನಲ್ಲಿ ನಡೆದಿತ್ತು. ಆದರೆ ಈ ಬಾರಿ ಸ್ಥಳ ಬದಲಾಯಿಸಲಾಗುತ್ತಿದೆ ಎಂದು ವರದಿ ಹೇಳಿದೆ.
ಹೌದು, ಕ್ರಿಕ್‌ಬಜ್ ವರದಿಯ ಪ್ರಕಾರ, ಈ ಬಾರಿ ಹರಾಜು ಪ್ರಕ್ರಿಯೆಯನ್ನು ಸೌದಿ ಅರೇಬಿಯಾದ ರಾಜಧಾನಿ ರಿಯಾದ್ ಅಥವಾ ಜೆಡ್ಡಾದಲ್ಲಿ ನಡೆಸಲು ಚಿಂತನೆ ನಡೆಸಲಾಗಿದೆ. ಈ ಎರಡು ನಗರಗಳ ಪೈಕಿ ರಿಯಾದ್ ಹೆಸರು ಮುಂಚೂಣಿಯಲ್ಲಿದ್ದು, ಕೆಲವೇ ದಿನಗಳಲ್ಲಿ ಬಿಸಿಸಿಐ ಇದಕ್ಕೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ.
ಇದನ್ನೂ ಓದಿ:60 ವರ್ಷಗಳ ನಂತರ ಭಾರತದ ಹಳೆಯ ಪ್ಲಾನ್ ಅನುಸರಿಸಿ ಟೆಸ್ಟ್ನಲ್ಲಿ ಸಕ್ಸಸ್ ಆದ ಪಾಕಿಸ್ತಾನ!