ವಿಶಾಖಪಟ್ಟಣ:ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಕ್ತಾಯಗೊಂಡಿದೆ. ಭಾರತ 6 ವಿಕೆಟ್ ನಷ್ಟಕ್ಕೆ 336 ರನ್ ಕಲೆಹಾಕಿದೆ. ಯಶಸ್ವಿ ಜೈಸ್ವಾಲ್ 179 ರನ್ ಗಳಿಸಿ ಅಜೇಯರಾಗಿ ಉಳಿದಿದ್ದು, ಮತ್ತೊಂದೆಡೆ ಅಶ್ವಿನ್ ಕೂಡ ಅಜೇಯರಾಗಿ ಎರಡನೇ ದಿನದಾಟಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.
ವಿಶಾಖಪಟ್ಟಣದ ವೈ ಎಸ್ ರಾಜಶೇಖರ್ ರೆಡ್ಡಿ ಮೈದಾನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ನಾಯಕ ರೋಹಿತ್ ಶರ್ಮಾ ಮತ್ತು ಜೈಸ್ವಾಲ್ ಜೊತೆಗೂಡಿ ಮೊದಲ ವಿಕೆಟ್ಗೆ 40 ರನ್ಗಳ ಜೊತೆಯಾಟ ಆಡಿದರು. ಈ ವೇಳೆ, 14 ರನ್ಗಳಿಸಿದ್ದ ರೋಹಿತ್ ಔಟಾಗಿ ಪೆವಿಲಿಯನ್ ಸೇರುವ ಮೂಲಕ ಭಾರತ ಆರಂಭಿಕ ಆಘಾತ ಎದುರಿಸಿತು. ಬಳಿಕ ಕ್ರೀಸ್ಗಿಳಿದ ಶುಭ್ಮನ್ ಗಿಲ್ (34), ಶ್ರೇಯಸ್ ಅಯ್ಯರ್ (27), ರಜತ್ ಪಾಟಿದಾರ್ (32), ಅಕ್ಷರ್ ಪಟೇಲ್ (27) ಮತ್ತು ಕೆಎಸ್ ಭರತ್ (17) ಕೂಡ ಹೆಚ್ಚು ಹೊತ್ತು ಕ್ರೀಸ್ನಲ್ಲಿ ಉಳಿಯದೇ ಪೆವಿಲಿಯನ್ ಸೇರಿದರು. ಇಂದಿನ ಪಂದ್ಯದಲ್ಲಿ ಜೈಸ್ವಾಲ್ ಹೊರತುಪಡಿಸಿ ಭಾರತದ ಯಾವೊಬ್ಬ ಬ್ಯಾಟರ್ ಅರ್ಧಶತಕ ಗಳಿಸಲು ಸಾಧ್ಯವಾಗಿಲ್ಲ. ಕ್ರೀಸ್ನಲ್ಲಿ ನೆಲೆಯೂರಿ ನಿಂತಿರುವ ಜೈಸ್ವಾಲ್ ಆಂಗ್ಲ ಬೌಲರ್ಗಳನ್ನು ಬೆವರಿಳಿಸಿದ್ದಾರೆ. 257 ಎಸೆತಗಳನ್ನು ಎದುರಿಸಿ 179 ರನ್ ಗಳಿಸಿ ದ್ವಿಶತಕದ ಸನಿಹಕ್ಕೆ ಬಂದು ನಿಂತಿದ್ದಾರೆ.