ICC Champion Trophy 2025: ಬಹು ನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಮುಂದಿನ ವಾರದಿಂದ ಪ್ರಾರಂಭವಾಗಲಿದೆ. 7 ವರ್ಷಗಳ ಬಳಿಕ ನಡೆಯುತ್ತಿರುವ ಈ ಟೂರ್ನಿಯ ಪಂದ್ಯಾವಳಿಗಳು ಪಾಕಿಸ್ತಾನ ಮತ್ತು ದುಬೈನಲ್ಲಿ ನಡೆಯಲಿವೆ.
ಈಗಾಗಲೇ ಎರಡು ಭಾರಿ (2002 ಮತ್ತು 2013)ರಲ್ಲಿ ಗೆಲುವು ಸಾಧಿಸಿದೆ. ಇದೀಗ ಮೂರನೇ ಬಾರಿಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಚಾಂಪಿಯನ್ ಆಗಲು ಬಯಸಿದೆ. ಆದರೆ ಪಂದ್ಯಾವಳಿ ಆಂರಂಭಕ್ಕೂ ಮೊದಲೇ ಭಾರತಕ್ಕೆ ಆಘಾತ ಎದುರಾಗಿದೆ.
ಜಸ್ಪ್ರೀತ್ ಬುಮ್ರಾ ಔಟ್:ಹೌದು, ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಪಡೆದಿದ್ದ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಆರಂಭಿಕ ಬ್ಯಾಟರ್ ಜೈಸ್ವಾಲ್ ಇಬ್ಬರು ಈ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಬುಮ್ರಾ ಇತ್ತೀಚೆಗೆ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ 150ಕ್ಕೂ ಹೆಚ್ಚು ಓವರ್ ಬೌಲ್ ಮಾಡಿ ಬೆನ್ನು ನೋವಿಗೆ ತುತ್ತಾಗಿದ್ದರು. ಇದರಿಂದಾಗಿ 5ನೇ ಪಂದ್ಯದಲ್ಲಿ ಅರ್ಧಕ್ಕೆ ಮೈದಾನ ತೊರೆದಿದ್ದ ಅವರು ಬಳಿಕ ಬೌಲಿಂಗ್ ಮಾಡಲು ಸಾಧ್ಯವಾಗಿರಲಿಲ್ಲ. ಬೆನ್ನು ನೋವಿನಿಂದ ಬಳಲುತ್ತಿರುವ ಬುಮ್ರಾ ಇನ್ನೂ ಚೇತರಿಸಿಕೊಂಡಿಲ್ಲ. ಈ ಹಿನ್ನೆಲೆ ಚಾಂಪಿಯನ್ಸ್ ಟ್ರೋಫಿಯ ಅಂತಿಮ ತಂಡದಿಂದ ಹೊರ ಬಿದ್ದಿದ್ದಾರೆ.
ಹೊರಬಿದ್ದ ಜೈಸ್ವಾಲ್:ತಂಡದಲ್ಲಿ ಸ್ಥಾನ ಪಡೆದಿದ್ದ ಜೈಸ್ವಾಲ್ ಅವರನ್ನೂ ಕೈಬಿಡಲಾಗಿದ್ದು, ಅವರ ಸ್ಥಾನಕ್ಕೆ ಬದಲಿ ಆಟಗಾರನಾಗಿ ಕನ್ನಡಿಗನಿಗೆ ಅವಕಾಶ ನೀಡಲಾಗಿದೆ.