ಬೆಂಗಳೂರು:ವಿಜಯ್ ಹಜಾರೆ ಟ್ರೋಫಿ ಮುಡಿಗೇರಿಸಿಕೊಂಡ ಕರ್ನಾಟಕ ತಂಡವು ರಣಜಿ ಟ್ರೋಫಿ ಟೂರ್ನಿಯಲ್ಲಿ ಪಂಜಾಬ್ ವಿರುದ್ಧ ತನ್ನ ಮುಂದಿನ ಪಂದ್ಯವನ್ನು ಆಡಲಿದೆ. ಜನವರಿ 23 ರಿಂದ 26ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯಕ್ಕಾಗಿ ಬಲಿಷ್ಠ ತಂಡವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಪ್ರಕಟಿಸಿದೆ.
ಮಯಾಂಕ್ ಅಗರ್ವಾಲ್ ನಾಯಕರಾಗಿ ಮುಂದುವರೆದಿದ್ದು, ಶ್ರೇಯಸ್ ಗೋಪಾಲ್‌ಗೆ ಉಪನಾಯಕನ ಜವಾಬ್ದಾರಿ ವಹಿಸಲಾಗಿದೆ. ಆದರೆ ಟೂರ್ನಿಯಲ್ಲಿ ಮೊದಲ ಚರಣದ ಪಂದ್ಯಗಳಿಗೆ ತಂಡದಲ್ಲಿದ್ದ ಅನುಭವಿ ಆಟಗಾರ ಮನೀಶ್ ಪಾಂಡೆ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಲವನಿತ್ ಸಿಸೋಡಿಯಾ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಕರ್ನಾಟಕ ತಂಡ :ಮಯಾಂಕ್ ಅಗರ್ವಾಲ್ (ನಾಯಕ), ಶ್ರೇಯಸ್ ಗೋಪಾಲ್ (ಉಪ ನಾಯಕ), ದೇವದತ್ ಪಡಿಕ್ಕಲ್, ಅನೀಶ್ ಕೆ.ವಿ., ಸ್ಮರಣ್ ಆರ್, ಶ್ರೀಜಿತ್ ಕೆ.ಎಲ್ (ವಿ.ಕೀ), ಅಭಿನವ್ ಮನೋಹರ್, ಹಾರ್ದಿಕ್ ರಾಜ್, ಪ್ರಸಿದ್ಧ್ ಕೃಷ್ಣ, ಕೌಶಿಕ್ ವಿ., ಅಭಿಲಾಷ್ ಶೆಟ್ಟಿ, ಯಶೋವರ್ಧನ್ ಪರಾಂತಪ್, ನಿಕಿನ್ ಜೋಸ್, ವಿದ್ಯಾಧರ್ ಪಾಟೀಲ್, ಸುಜಯ್ ಸತೇರಿ (ವಿ.ಕೀ), ಮೊಹ್ಸಿನ್ ಖಾನ್.