ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (IPL)ನ 17ನೇ ಆವೃತ್ತಿಯ ಫೈನಲ್ ಪಂದ್ಯದ ಮೊದಲ ಇನ್ನಿಂಗ್ಸ್ ಮುಕ್ತಾಯಗೊಂಡಿದೆ.
ಎಂಎ ಚಿದಾಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಸನ್ ರೈಸರ್ಸ್ ತಂಡ ಕೋಲ್ಕತ್ತಾದ ಮಾರಕ ಬೌಲಿಂಗ್ ದಾಳಿಗೆ ಸಿಲುಕಿ ಅಲ್ಪ ಮೊತ್ತಕ್ಕೆ ಕುಸಿದಿದೆ. ನಿಗದಿತ 20 ಓವರ್ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 113ರನ್ಗಳ ಸಾಧಾರಣ ಮೊತ್ತವನ್ನು ಕಲೆ ಹಾಕಿದೆ.
ಬ್ಯಾಟಿಂಗ್ ವೈಫಲ್ಯ:ಬೃಹತ್ ಮೊತ್ತ ಕಲೆ ಹಾಕುವ ಉದ್ದೇಶದೊಂದಿಗೆ ಕಣಕ್ಕಿಳಿದಿದ್ದ ಕಮಿನ್ಸ್ ಪಡೆ ಪವರ್ ಪ್ಲೇನಲ್ಲೇ 21 ರನ್ಗಳಿಗೆ ಪ್ರಮುಖ ಮೂರು ವಿಕೆಟ್ಗಳನ್ನು ಕಳೆದುಕೊಂಡಿತು. ಓಪನರ್ ಆಗಿ ಕ್ರೀಸ್ಗಿಳಿದಿದ್ದ ಅಭಿಶೇಕ್ ಶರ್ಮಾ ಕೇವಲ 2 ರನ್ಗಳಿಸಿ ನಿರ್ಗಮಿಸಿದರೆ ಟ್ರಾವಿಸ್ ಹೆಡ್ ಮತ್ತೊಮ್ಮೆ ಖಾತೆ ತೆರೆಯದೆ ನಿರ್ಗಮಿಸಿದರು. ತ್ರಿಪಾಠಿ (9) ಕೂಡ ಹೆಚ್ಚು ಹೊತ್ತು ಕ್ರೀಸ್ನಲ್ಲಿ ಉಳಿಯದೆ ನಿರ್ಗಮಿಸಿದರು.
ಈ ವೇಳೆ ಮಾಕ್ರಮ್ ತಂಡದ ಸ್ಕೋರ್ ಹೆಚ್ಚಿಸಲು ಪ್ರಯತ್ನಿಸಿದರಾದೂ ಸಾಧ್ಯವಾಗದೇ 20 ರನ್ ಗಳಿಸಿ ಪೆವಿಲಿಯನ್ ಸೇರಿದರು. ಉಳಿದಂತೆ ನಿತೀಶ್ ರೆಡ್ಡಿ (13), ಕ್ಲಾಸೆನ್ (16), ಶಹಬಾಜ್ (8), ಸಮದ್ (4), ಉನದ್ಕತ್ (4) ಪೆವಿಲಿಯನ್ ಪರೇಡ್ ಮಾಡಿದರು. ಅಂತಿಮಾವಾಗಿ ನಾಯಕ ಪ್ಯಾಟ್ ಕಮಿನ್ಸ್ ಕೆಲ ಹೊತ್ತು ಕ್ರೀಸ್ನಲ್ಲಿ ನೆಲೆಯೂರಿ 24 ರನ್ಗಳಿ ನಿರ್ಗಮಿಸಿದರು. ಅಲ್ಲದೇ ತಂಡದ ಹೈಸ್ಕೋರರ್ ಎನಿಸಿಕೊಂಡರು. ಕೆಕೆಆರ್ ಪರ ರಸ್ಸೆಲ್ 3, ಸ್ಟಾರ್ಕ್ ಮತ್ತು ಹರ್ಷಿತ್ ರಾಣಾ ತಲಾ ಎರಡು ವಿಕೆಟ್ ಪಡೆದರು.
ಕೆಕೆಆರ್ ತಂಡ ಮೊದಲ ಕ್ವಾಲಿಫೈಯರ್ನಲ್ಲಿ ಹೈದರಾಬಾದ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತ್ತು. ನಂತರ ಕ್ವಾಲಿಫೈಯರ್-2ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ್ ರಾಯಲ್ಸ್ ಅನ್ನು ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಟೂರ್ನಿಯಲ್ಲಿ ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡಿದ್ದು, ಪಾಯಿಂಟ್ಸ್ ಪಟ್ಟಿಯಲ್ಲಿ ಕೆಕೆಆರ್ ತಂಡ ಮೊದಲ ಸ್ಥಾನದಲ್ಲಿದ್ದರೆ, ಹೈದರಾಬಾದ್ ತಂಡ ಎರಡನೇ ಸ್ಥಾನದಲ್ಲಿದೆ.