ಹೈದರಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಗುರುವಾರದಿಂದ ಆರಂಭವಾಗಲಿದೆ. ಸರಣಿಯ ಮೊದಲ ಟೆಸ್ಟ್ ಪಂದ್ಯ ಹೈದರಾಬಾದ್‌ನಲ್ಲಿ ನಡೆಯಲಿದೆ. ಇದಕ್ಕಾಗಿ ಟೀಂ ಇಂಡಿಯಾ ಆಟಗಾರರು ಸಕಲ ಸಿದ್ಧತೆ ನಡೆಸಿದ್ದಾರೆ. ಇದರ ನಡುವೆಯೇ ತಂಡದಿಂದ ಮತ್ತೊಂದು ಅಪ್ಡೇಟ್ ಹೊರಬಿದ್ದಿದೆ. ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿ ಆಡುವುದಿಲ್ಲ ಎಂದು ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸಹಜವಾಗಿ, ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಅಲ್ಲದೇ ಸರಣಿಯನ್ನು ಡ್ರಾ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ ಇಂಗ್ಲೆಂಡ್ ವಿರುದ್ಧ 5 ಟೆಸ್ಟ್ ಪಂದ್ಯಗಳು 45 ದಿನಗಳ ಕಾಲ ನಡೆಯುವುದರಿಂದ ಸರಣಿಯ ಪರಿಸ್ಥಿತಿಗಳು ಮತ್ತು ಅವಧಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಹಾಗಾಗಿ ಇನ್ನಿಬ್ಬರು ವಿಕೆಟ್ ಕೀಪರ್ಗಳನ್ನು ತಂಡಕ್ಕೆ ಆಯ್ಕೆ ಮಾಡಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದೀಗ ಧ್ರುವ್ ಜುರೆಲ್ ಮತ್ತು ಕೆಎಸ್ ಭರತ್ ನಡುವೆ ವಿಕೆಟ್ ಕೀಪರ್ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿದೆ.
ಉಳಿದಂತೆ ಅನುಭವಿ ಬ್ಯಾಟರ್ ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದು, ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಉಪನಾಯಕನ ಪಾತ್ರವನ್ನು ವಹಿಸಿಕೊಂಡಿದ್ದಾರೆ. ಜನವರಿ 25 ರಿಂದ ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ನೊಂದಿಗೆ ಐದು ಟೆಸ್ಟ್ ಪಂದ್ಯಗಳ ಸರಣಿ ಆರಂಭವಾಗಲಿದೆ.
ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ:ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಯಶಸ್ವಿ ಜೈಸ್ವಾಲ್, ಕೆಎಸ್ ಭರತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಅವೇಶ್ ಖಾನ್.
ಭಾರತ Vs ಇಂಗ್ಲೆಂಡ್ ಟೆಸ್ಟ್ ವೇಳಾಪಟ್ಟಿ