ಕೋಲ್ಕತ್ತಾ:ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ನ 28ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ 8 ವಿಕೆಟ್‌ಗಳ ಜಯ ದಾಖಲಿಸಿದೆ. ಲಕ್ನೋ ನೀಡಿದ್ದ 162 ರನ್‌ಗಳ ಗುರಿ ಬೆನ್ನತ್ತಿದ ಕೆಕೆಆರ್ ಪಿಲಿಫ್ ಸಾಲ್ಟ್ (89) ಅಮೋಘ ಬ್ಯಾಟಿಂಗ್ ನೆರವಿನಿಂದ 15.4 ಓವರ್‌ಗಳಲ್ಲಿಯೇ ಕೇವಲ 2 ವಿಕೆಟ್ ಕಳೆದುಕೊಂಡು ತಲುಪಿತು. ಈ ಮೂಲಕ ಪ್ರಸಕ್ತ ಋತುವಿನಲ್ಲಿ ನಾಲ್ಕನೇ ಗೆಲುವಿನ ನಗೆ ಬೀರಿತು.
ಮೊದಲು ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ಗೆ ಉತ್ತಮ ಆರಂಭ ಸಿಗಲಿಲ್ಲ. ತಂಡವು ಎರಡನೇ ಓವರ್‌ನಲ್ಲಿಯೇ ಆರಂಭಿಕ ಬ್ಯಾಟರ್ ಕ್ವಿಂಟನ್ ಡಿ ಕಾಕ್ (10) ವಿಕೆಟ್ ಒಪ್ಪಿಸಿದರು. ಬಳಿಕ ದೀಪಕ್ ಹೂಡಾ 10 ಎಸೆತಗಳಲ್ಲಿ ಎಂಟು ರನ್ ಗಳಿಸಲಷ್ಟೇ ಶಕ್ತರಾದರು. ಲಕ್ನೋ ನಾಯಕ ಕೆಎಲ್ ರಾಹುಲ್ 27 ಎಸೆತಗಳಲ್ಲಿ 39 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು.