IPL 2024 54th Match:IPL 2024 ರ 54 ನೇ ಪಂದ್ಯವು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯುತ್ತಿದೆ. ಲಕ್ನೋ ನಾಯಕ ಕೆಎಲ್ ರಾಹುಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಐಪಿಎಲ್ 2024 ರಲ್ಲಿ ಎರಡೂ ತಂಡಗಳ ಪ್ರದರ್ಶನ ಉತ್ತಮವಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ಪ್ರಸಕ್ತ ಋತುವಿನಲ್ಲಿ ತನ್ನ ಪ್ರಾಬಲ್ಯವನ್ನು ಉಳಿಸಿಕೊಂಡಿದೆ ಮತ್ತು ನಿರಂತರವಾಗಿ ಎದುರಾಳಿ ತಂಡಗಳಿಗೆ ಕಠಿಣ ಪೈಪೋಟಿ ನೀಡುತ್ತಿದೆ.
ಕೆಎಲ್ ರಾಹುಲ್ ನೇತೃತ್ವದ ತಂಡ ಪ್ರಸಕ್ತ ಸೀಸನ್ನಲ್ಲಿ 10 ಪಂದ್ಯಗಳನ್ನು ಆಡಿದ್ದು, 6ರಲ್ಲಿ ಗೆದ್ದು 4ರಲ್ಲಿ ಸೋತಿದೆ. ತಂಡವು 12 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಐಪಿಎಲ್ 2024 ರ ಎರಡನೇ ಅತ್ಯಂತ ಯಶಸ್ವಿ ತಂಡವಾಗಿದೆ. 10 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿರುವ ತಂಡ ಮೂರರಲ್ಲಿ ಮಾತ್ರ ಸೋಲನ್ನು ಎದುರಿಸಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್ ಪ್ಲೇಆಫ್‌ಗೆ ಅರ್ಹತೆ ಪಡೆಯುವ ಸಮೀಪಕ್ಕೆ ಬಂದಿದೆ. ತಂಡ 14 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಲಕ್ನೋ ತಂಡ ಗಾಯಗೊಂಡಿರುವ ವೇಗಿ ಮಯಾಂಕ್ ಯಾದವ್ ಬದಲಿಗೆ ಯಶ್ ಠಾಕೂರ್ ಅವರಿಗೆ ಅವಕಾಶ ನೀಡಿದ್ದು, ಕೆಕೆಆರ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.