ಜೈಪುರ (ರಾಜಸ್ಥಾನ):ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯ ನಾಲ್ಕನೇ ಪಂದ್ಯ ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯುತ್ತಿದೆ. ಸವಾಯಿ ಮಾನ್ಸಿಂಗ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ ಮೊದಲಿಗೆ ಬ್ಯಾಟಿಂಗ್ ಮಾಡಿ ಲಕ್ನೋ ತಂಡದ ಗೆಲುವಿಗೆ ಬೃಹತ್ ಮೊತ್ತದ ಗುರಿ ನೀಡಿದೆ.
ಐಪಿಎಲ್ 2024 ರ ನಾಲ್ಕನೇ ಪಂದ್ಯವು ಜೈಪುರದ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ರಾಜಸ್ಥಾನಕ್ಕೆ ಗೆಲ್ಲಲು 194 ರನ್ಗಳ ಗುರಿ ಇದೆ. ಈ ಪಂದ್ಯದಲ್ಲಿ ರಾಜಸ್ಥಾನ ತಂಡದ ನಾಯಕ ಸಂಜು ಸ್ಯಾಮ್ಸನ್ ಟಾಸ್ ಗೆದ್ದು ಲಕ್ನೋ ವಿರುದ್ಧ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆರಂಭಿಕ ಆಘಾತ ಎದುರಿಸಿದರೂ ಸಹ ಸಂಜ ಸ್ಯಾಮ್ಸನ್ ಅವರ ಅಬ್ಬರದ 82 ರನ್ಗಳ ಬಿರುಗಾಳಿಯ ಇನ್ನಿಂಗ್ಸ್ ಬೃಹತ್ ಸ್ಕೋರ್ದತ್ತ ಕೊಂಡೊಯಿತು. ಒಟ್ನಲ್ಲಿ ನಿಗಿದಿತ 20 ಓವರ್ಗಳಿಗೆ ರಾಜಸ್ಥಾನ 4 ವಿಕೆಟ್ ಕಳೆದುಕೊಂಡು 193 ರನ್ ಗಳಿಸಿತು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಗೆಲುವಿಗೆ 194 ರನ್ಗಳ ಗುರಿ ಇದೆ.
ಸ್ಪೈಡರ್ ಕ್ಯಾಮ್ನ ವೈರ್ ಕಟ್: ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯ ನಾಲ್ಕನೇ ಪಂದ್ಯ ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯುತ್ತಿದೆ. ಸವಾಯಿ ಮಾನ್ಸಿಂಗ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ ಮೊದಲಿಗೆ ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತು. ಈ ವೇಳೆ ಆರ್ಆರ್ ತಂಡದ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಬ್ಯಾಟಿಂಗ್ ಮಾಡಲು ಕಣಕ್ಕಿಳಿದರು.