ಪ್ಯಾರಿಸ್ (ಫ್ರಾನ್ಸ್):ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರ ಮೂರನೇ ದಿನದಲ್ಲಿ ಭಾರತೀಯ ಅಥ್ಲೀಟ್‌ಗಳು ಅದ್ಭುತ ಪ್ರದರ್ಶನವನ್ನು ಮುಂದುವರೆಸಿದ್ದಾರೆ. ಭಾರತದ ಪುರುಷ ಶೂಟರ್ ಮನೀಶ್ ನರ್ವಾಲ್ ಭಾರತಕ್ಕೆ ನಾಲ್ಕನೇ ಪದಕ ತಂದುಕೊಟ್ಟಿದ್ದಾರೆ. ಪುರುಷರ 10 ಮೀಟರ್ ಏರ್ ಪಿಸ್ತೂಲ್ (SH1) ಸ್ಪರ್ಧೆಯಲ್ಲಿ ಮನೀಶ್ ನರ್ವಾಲ್ ಬೆಳ್ಳಿ ಪದಕ ಗೆದ್ದಿದ್ದಾರೆ.
ಶುಕ್ರವಾರ ನಡೆದ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮನೀಶ್ 234.9 ಅಂಕಗಳನ್ನು ಗಳಿಸುವ ಮೂಲಕ ಬೆಳ್ಳಿಯ ಗೆದ್ದರು. ಈ ಸ್ಪರ್ಧೆಯಲ್ಲಿ ಕೊರಿಯಾದ ಜೋ ಜೊಂಗ್ಡು 237.4 ಅಂಕ ಗಳಿಸಿ ಚಿನ್ನದ ಪದಕ ಜಯಿಸಿದರು. ಚೀನಾದ ಯಂಗ್ ಚಾವೊ 214.3 ಅಂಕಗಳೊಂದಿಗೆ ಕಂಚಿನ ಪದಕ ವಶಪಡಿಸಿಕೊಂಡರು. 2024ರ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಪದಕ ಗೆದ್ದ ಮೂರನೇ ಶೂಟರ್ ಎಂಬ ಹೆಗ್ಗಳಿಕೆಗೆ ಮನೀಶ್ ಪಾತ್ರರಾಗಿದ್ದಾರೆ.