ಪ್ಯಾರಿಸ್:ಪ್ಯಾರಿಸ್ ಒಲಿಂಪಿಕ್ 2024ರ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಪಂದ್ಯದಲ್ಲಿ ಭಾರತೀಯ ಶೂಟರ್‌ಗಳಾದ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಅದ್ಭುತ ಪ್ರದರ್ಶನ ತೋರಿ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ. ಈ ಮೂಲಕ ಭಾರತಕ್ಕೆ ಶೂಟಿಂಗ್ನಲ್ಲಿ ಎರಡನೇ ಪದಕ ಬಂದಿದೆ. ಇದರೊಂದಿಗೆ ಒಲಿಂಪಿಕ್ನ ಮಿಶ್ರ ಪಂದ್ಯದಲ್ಲಿ ಭಾರತಕ್ಕೆ ಇದು ಮೊದಲ ಪದಕವಾಗಿದೆ.
ಕೊರಿಯಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಭಾರತದ ಸ್ಟಾರ್ ಜೋಡಿ ಕೊರಿಯನ್ 16-10 ಅಂತರದಿಂದ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ 22 ವರ್ಷದ ಮನು ಭಾಕರ್ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಒಲಿಂಪಿಕ್ ಆವೃತ್ತಿ ಒಂದರಲ್ಲೇ ಎರಡು ಪದಕ ಗೆದ್ದ ಭಾರತದ ಮೊದಲ ಶೂಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸಿಂಗಲ್ಸ್ನಲ್ಲೂ ಮನು ಭಾಕರ್ಗೆ ಕಂಚು; ಇದಕ್ಕೂ ಮೊದಲು ಭಾನುವಾರ ನಡೆದಿದ್ದ ಸ್ಪರ್ಧೆಯಲ್ಲಿ ಮನು ಭಾಕರ್ ಅವರು 10 ಮೀಟರ್ ಏರ್ ಪಿಸ್ತೂಲ್ ಮಹಿಳೆಯರ ಸಿಂಗಲ್ಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಪ್ಯಾರಿಸ್ ಒಲಿಂಪಿಕ್ನ ಮೊದಲ ಪದಕವನ್ನು ನೀಡಿದ್ದರು. ಇದೇ ವೇಳೆ ಸರಬ್ಜೋತ್ ಸಿಂಗ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಆರನೇ ಭಾರತೀಯ ಶೂಟರ್ ಎನಿಸಿಕೊಂಡರು.