SMAT 2024: ಟೀಂ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಬ್ಯಾಟಿಂಗ್‌ನಲ್ಲೂ ಆಕರ್ಷಕ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಪ್ರತಿಷ್ಠಿತ ದೇಶೀಯ ಟಿ20 ಟೂರ್ನಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಭಾಗವಾಗಿ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಚಂಡೀಗಢ ವಿರುದ್ಧದ ಕ್ವಾರ್ಟರ್ ಫೈನಲ್‌ನಲ್ಲಿ ಬಂಗಾಳ ತಂಡದ ಶಮಿ, ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅಬ್ಬರಿಸಿದರು.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಬಂಗಾಳ, ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು. 114 ರನ್ಗಳಿಗೆ 8 ವಿಕೆಟ್ ಕಳೆದುಕೊಂಡಿದ್ದ ಬಂಗಾಳಕ್ಕೆ ಕೊನೆಯಲ್ಲಿ ಶಮಿ ಆಸರೆಯಾದರು. ಶಮಿ ಎರಡು ಸಿಕ್ಸರ್ ಮತ್ತು ಮೂರು ಬೌಂಡರಿಗಳ ಸಹಾಯದಿಂದ 17 ಎಸೆತಗಳಲ್ಲಿ 32 ರನ್ಗಳನ್ನು ಚಚ್ಚಿ ತಂಡದ ಸ್ಕೋರ್ ಹೆಚ್ಚಿಸಿದರು.