ಪ್ಯಾರಿಸ್ (ಫ್ರಾನ್ಸ್):ಇಲ್ಲಿ ನಡೆಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ 2024ರ 10 ಮೀಟರ್ ಏರ್ ಪಿಸ್ತೂಲ್ ಮಹಿಳೆಯರ ವೈಯಕ್ತಿಕ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತದ ಅಗ್ರ ಶೂಟರ್ ಮನು ಭಾಕರ್ ಅವರು ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಇಂದು (ಶನಿವಾರ) ನಡೆದ ಅರ್ಹತಾ ಸ್ಪರ್ಧೆಯಲ್ಲಿ 580 ಅಂಕಗಳು ಮತ್ತು 27 ಬುಲ್‌ಸೈಸ್‌ಗಳೊಂದಿಗೆ ಮೂರನೇ ಸ್ಥಾನ ಪಡೆದರು.
ಮನು ಭಾಕರ್ ಅವರು ಆರು ಸರಣಿಗಳಲ್ಲಿ 97, 97, 98, 96, 96 ಮತ್ತು 96 ಪಾಯಿಂಟ್ಗಳನ್ನು ಗಳಿಸಿದರು. ಮೊದಲ ಮೂರು ಸುತ್ತುಗಳಲ್ಲಿನ ಪ್ರದರ್ಶನ ಅವರನ್ನು ಅಗ್ರ ಎರಡು ಸ್ಥಾನಕ್ಕೆ ತೆಗೆದುಕೊಂಡು ಹೋಗಲು ಸಾಧ್ಯವಾಯಿತು. ನಂತರ ಅವರು ಮೂರನೇ ಸ್ಥಾನದಲ್ಲಿ ತಮ್ಮ ಪ್ರದರ್ಶನವನ್ನು ಮುಂದುವರೆಸಿದರು.
ನಡೆಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ 27 ಬುಲ್‌ಸೈಸ್‌ಗಳನ್ನು ಗಳಿಸಿದರು.
ಇತಿಹಾಸ ಸೃಷ್ಟಿಸಿದ ಮನು ಭಾಕರ್: ಕಳೆದ 20 ವರ್ಷಗಳ ನಂತರ, ವೈಯಕ್ತಿಕ ಸ್ಪರ್ಧೆಯಲ್ಲಿ ಒಲಿಂಪಿಕ್ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಮನು ಭಾಕರ್ ಪಾತ್ರರಾಗಿದ್ದಾರೆ. ಕಳೆದ ಬಾರಿ 2004ರಲ್ಲಿ ಅಥೆನ್ಸ್‌ನಲ್ಲಿ ನಡೆದ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಸುಮಾ ಶಿರೂರ್ ಫೈನಲ್ ತಲುಪಿದ್ದರು.