ನವದೆಹಲಿ : ಪ್ಯಾರಿಸ್ ಒಲಿಂಪಿಕ್ಸ್ 2024ಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದ ಅಂದರೆ ಜುಲೈ 27 ರಿಂದ ಎಲ್ಲಾ ದೇಶಗಳ ಕ್ರೀಡಾಪಟುಗಳು ವಿವಿಧ ಕ್ರೀಡೆಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಲಿದ್ದಾರೆ. ಇಂದು ಭಾರತದ ಕ್ರೀಡಾಪಟುಗಳು ಶೂಟಿಂಗ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಹಾಕಿ ಮತ್ತು ಟೆನ್ನಿಸ್‌ನಂತಹ ಆಟಗಳಲ್ಲಿ ಭಾರತಕ್ಕಾಗಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಅದಕ್ಕೂ ಮುನ್ನ ಇಂದು ಯಾವ ಪಂದ್ಯದಲ್ಲಿ ಯಾವ ಆಟಗಾರರು ಭಾರತಕ್ಕೆ ಸವಾಲೊಡ್ಡಲಿದ್ದಾರೆ ಎಂಬುದನ್ನು ನಾವು ನಿಮಗೆ ತಿಳಿಸಲಿದ್ದೇವೆ.
ಭಾರತೀಯ ಅಥ್ಲೀಟ್‌ಗಳ ಸ್ಪರ್ಧೆ : ಶೂಟಿಂಗ್ನಲ್ಲಿ ಒಟ್ಟು 3 ಪಂದ್ಯಗಳು ನಡೆಯಲಿವೆ. ಅವುಗಳೆಂದರೆ, 10 ಮೀಟರ್ ಏರ್ ರೈಫಲ್ (ಟೀಂ), 10 ಮೀಟರ್ ಏರ್ ಪಿಸ್ತೂಲ್ ಪುರುಷರ ವಿಭಾಗ, 10 ಮೀಟರ್ ಏರ್ ಪಿಸ್ತೂಲ್ ಮಹಿಳೆಯರ ವಿಭಾಗಕ್ಕೆ ಸ್ಪರ್ಧೆಗಳು ನಡೆಯಲಿವೆ.
ಭಾರತದ 10 ಮೀಟರ್ ಏರ್ ರೈಫಲ್ಸ್ ತಂಡದಲ್ಲಿ ಸಂದೀಪ್ ಸಿಂಗ್, ಅರ್ಜುನ್ ಬಾಬುತಾ, ಎಲವೆನಿಲ್ ವಲರಿವನ್, ರಮಿತಾ ಜಿಂದಾಲ್ ಸ್ಪರ್ಧಿಸಲಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಪುರುಷರ ಪಂದ್ಯದಲ್ಲಿ ಸರಬ್ಜೋತ್ ಸಿಂಗ್, ಅರ್ಜುನ್ ಚೀಮಾ ಸ್ಪರ್ಧಿಸಲಿದ್ದಾರೆ. ಇದರೊಂದಿಗೆ 10 ಮೀಟರ್ ಏರ್ ಪಿಸ್ತೂಲ್ ಮಹಿಳಾ ವಿಭಾಗದಲ್ಲಿ ರಿದಮ್ ಸಾಂಗ್ವಾನ್, ಮನು ಭಾಕರ್ ಭಾಗವಹಿಸಲಿದ್ದಾರೆ.
10 ಮೀ ಏರ್ ರೈಫಲ್ ಮಿಶ್ರ ತಂಡ (ಸಂದೀಪ್ ಸಿಂಗ್, ಅರ್ಜುನ್ ಬಾಬುತಾ, ಎಲವೆನಿಲ್ ವಲರಿವನ್, ರಮಿತಾ ಜಿಂದಾಲ್) ಸ್ಪರ್ಧೆ ಫ್ರಾನ್ಸ್‌ನ ಕಾಲಮಾನ, ಮಧ್ಯಾಹ್ನ 12:30 ಕ್ಕೆ ನಡೆಯಲಿದೆ.
10 ಮೀ ಏರ್ ಪಿಸ್ತೂಲ್ ಪುರುಷರ ವಿಭಾಗ (ಸರಬ್ಜೋತ್ ಸಿಂಗ್, ಅರ್ಜುನ್ ಚೀಮಾ) ಸ್ಪರ್ಧೆ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.
10 ಮೀ ಏರ್ ಪಿಸ್ತೂಲ್ ಮಹಿಳೆಯರ ವಿಭಾಗ (ರಿದಮ್ ಸಾಂಗ್ವಾನ್, ಮನು ಭಾಕರ್) ಸ್ಪರ್ಧೆ ಸಂಜೆ 4 ಗಂಟೆಗೆ ನಡೆಯಲಿದೆ.
ಬ್ಯಾಡ್ಮಿಂಟನ್ -ಇಂದು ಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕಾಗಿ ಮೂರು ಪಂದ್ಯಗಳು ನಡೆಯಲಿವೆ. ಇದರಲ್ಲಿ ಲಕ್ಷ್ಯ ಸೇನ್ ಪುರುಷರ ಸಿಂಗಲ್ಸ್‌ನಲ್ಲಿ ಗ್ವಾಟೆಮಾಲಾದ ಕಾರ್ಡನ್ ಕೆವಿನ್ ಅವರ ಎದುರು ಸ್ಪರ್ಧಿಸಲಿದ್ದಾರೆ. ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಫ್ರಾನ್ಸ್‌ನ ಕಾರ್ವಿ ಲುಕಾಸ್ ಮತ್ತು ಲೇಬರ್ ರೊನಾನ್ ಅವರನ್ನು ಎದುರಿಸಲಿದೆ.