ಪ್ಯಾರಿಸ್ (ಫ್ರಾನ್ಸ್):ಅರ್ಹತಾ ಮಾನದಂಡಕ್ಕಿಂತಲೂ ಹೆಚ್ಚಿನ ತೂಕ ಹೊಂದಿದ ಕಾರಣ ಪ್ಯಾರಿಸ್ ಒಲಿಂಪಿಕ್ಸ್ ಮಹಿಳೆಯರ 50 ಕೆಜಿ ಕುಸ್ತಿ ಫೈನಲ್ ಪಂದ್ಯದಿಂದ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಲಾಗಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ವಿನೇಶ್, ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ ಆಗಿದ್ದೀರಿ. ಇಂದಿನ ಹಿನ್ನಡೆ ನೋವು ತಂದಿದೆ. ಇದರಿಂದ ನಾನು ಅನುಭವಿಸುತ್ತಿರುವ ನೋವು ಮತ್ತು ಹತಾಶೆಯನ್ನು ಪದಗಳಲ್ಲಿ ಹೇಳುವುದು ಕಷ್ಟವಾಗಿದೆ. ನಿಮ್ಮಲ್ಲಿರುವ ಸ್ಥಿತಿಸ್ಥಾಪಕತ್ವ ಶಕ್ತಿ ಪರಿಸ್ಥಿತಿಯನ್ನು ಎದುರಿಸಲು ಧೈರ್ಯವಿದೆ. ಅಲ್ಲದೇ ಸವಾಲುಗಳನ್ನು ಎದುರಿಸುವುದು ನಿಮ್ಮ ಸ್ವಭಾವವಾಗಿದೆ. ಬಲವಾಗಿ ಹಿಂತಿರುಗಿ! ನಾವೆಲ್ಲರೂ ನಿಮಗಾಗಿ ಕಾಯುತ್ತಿದ್ದೇವೆ ಎಂದು ಎಕ್ಸ್ ಮೂಲಕ ತಿಳಿಸಿದ್ದಾರೆ.