ಚಂಡೀಗಢ:ಇಲ್ಲಿನ ಮುಲ್ಲನ್ಪುರದ ಮಹಾರಾಜ ಯದ್ವಿಂದರ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 37ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ಎದುರಾಗಿವೆ.
ಟಾಸ್ ಗೆದ್ದ ಪಂಜಾಬ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಸತತ ಸೋಲುಗಳಿಂದ ಕಂಗೆಟ್ಟಿರುವ ಪಂಜಾಬ್ ಪಾಯಿಂಟ್ ಪಟ್ಟಿಯಲ್ಲಿ 4 ಅಂಕಗಳೊಂದಿಗೆ ಕೊನೆಯಿಂದ 2ನೇ ಸ್ಥಾನದಲ್ಲಿದೆ. ಇತ್ತ ಗುಜರಾತ್ ಕೂಡ ಇದೇ ಹಾದಿಯಲ್ಲಿದ್ದು, 6 ಅಂಕಗಳೊಂದಿಗೆ 8ನೇ ಕ್ರಮಾಂಕದಲ್ಲಿದೆ. ಇತ್ತಂಡಗಳಿಗೆ ಈ ಪಂದ್ಯ ಗೆಲ್ಲುವುದು ಅನಿವಾರ್ಯವಾಗಿದೆ.
ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಪರವಾಗಿ ನಾಯಕ ಶುಭ್ಮನ್ ಗಿಲ್, ಡೇವಿಡ್ ಮಿಲ್ಲರ್, ರಶೀದ್ ಖಾನ್ ಸಿಡಿಯಬೇಕಿದೆ. ಇಂದಿನ ಪಂದ್ಯದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಆಫ್ಘಾನಿಸ್ತಾನದ ಆಲ್ರೌಂಡರ್ ಆಟಗಾರ ಅಜ್ಮತುಲ್ಲಾ ಒಮರ್ಜಾಯ್ ತಂಡ ಸೇರಿಕೊಂಡಿದ್ದಾರೆ. ಪಂಜಾಬ್ನಲ್ಲಿ ಯಾವುದೇ ಬದಲಾವಣೆ ಇಲ್ಲ.