ಕಾನ್ಪುರ (ಉತ್ತರ ಪ್ರದೇಶ): ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನವೇ ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ.
ಕಾನ್ಪುರ ಟೆಸ್ಟ್ ಪಂದ್ಯದಲ್ಲಿ ನಾಯಕ ನಜ್ಮುಲ್ ಹುಸೇನ್ ಶಾಂಟೊ ಅವರನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಆರ್ ಅಶ್ವಿನ್ ಔಟ್ ಮಾಡುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು ಮತ್ತು ಏಷ್ಯಾದ ಟೆಸ್ಟ್ ಸ್ವರೂಪದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಈ ಹಿಂದೆ ಈ ದಾಖಲೆ ಅನಿಲ್ ಕುಂಬ್ಳೆ ಹೆಸರಿನಲ್ಲಿ ದಾಖಲಾಗಿತ್ತು, ಆದರೆ, ಇದೀಗ ಅಶ್ವಿನ್ ಅದನ್ನು ಮುರಿದಿದ್ದಾರೆ. ಇದುವರೆಗೂ ಅಶ್ವಿನ್ ಏಷ್ಯಾದಲ್ಲಿ ನಡೆದ ಟೆಸ್ಟ್ ಪಂದ್ಯಗಳಿಂದ 420 ವಿಕೆಟ್ಗಳನ್ನು ಪಡೆದಿದ್ದಾರೆ. ಈ ಕ್ರಮದಲ್ಲಿ ದಿಗ್ಗಜ ಬೌಲರ್ ಅನಿಲ್ ಕುಂಬ್ಳೆ (419 ವಿಕೆಟ್) ಅವರನ್ನು ಹಿಂದಿಕ್ಕಿದ್ದಾರೆ.
ಅಲ್ಲದೇ ಏಷ್ಯಾದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಶ್ರೀಲಂಕಾದ ದಿಗ್ಗಜ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ (612) ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. 420 ವಿಕೆಟ್‌ಗಳೊಂದಿಗೆ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದರೆ, ಅನಿಲ್ ಕುಂಬ್ಳೆ ಮೂರನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ರಂಗನಾ ಹೆರಾತ್ ನಾಲ್ಕು ಮತ್ತು ಹರ್ಭಜನ್ ಸಿಂಗ್ ಐದನೇ ಸ್ಥಾನದಲ್ಲಿದ್ದಾರೆ.