ಚೆನ್ನೈ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಆಲ್ ರೌಂಡರ್ ಆರ್ ಅಶ್ವಿನ್ (102*) ಆಕರ್ಷಕ ಶತಕ ಸಿಡಿಸಿದ್ದಾರೆ. 108 ಎಸೆತಗಳನ್ನು ಎದುರಿಸಿದ ಅವರು 10 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 6ನೇ ಶತಕ ಪೂರೈಸಿದರು. ಮತ್ತೊಂದೆಡೆ, ಜಡೇಜಾ (86*) ಕೂಡ ಜವಾಬ್ದಾರಿಯುತ ಇನ್ನಿಂಗ್ಸ್ ಮೂಲಕ ಅರ್ಧಶತಕ ಪೂರೈಸಿದ್ದಾರೆ. ಇದರೊಂದಿಗೆ ಮೊದಲ ದಿನದಾಟದ ಅಂತ್ಯಕ್ಕೆ ಭಾರತ 6 ವಿಕೆಟ್ ನಷ್ಟಕ್ಕೆ 339 ರನ್ ಕಲೆಹಾಕಿದೆ. ಅಶ್ವಿನ್ ಮತ್ತುಜಡೇಜಾ ಎರಡನೇ ದಿನದಾಟಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಭಾರತ ಕಳಪೆ ಆರಂಭ ಪಡೆದುಕೊಂಡಿತು. ಕೇವಲ 144ರನ್ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಜೈಸ್ವಾಲ್ ಹೊರತುಪಡಿಸಿ ನಾಲ್ವರು ಬ್ಯಾಟರ್ಗಳು ಅರ್ಧಶತಕ ಪೂರೈಸಲು ಸಾಧ್ಯವಾಗದೇ ಪೆವಿಲಿಯನ್ ಸೇರಿದರು. ಈ ವೇಳೆ ತಂಡಕ್ಕೆ ಜಡೇಜಾ ಮತ್ತು ಅಶ್ವಿನ್ ನೆರವಾದರು. ಈ ಇಬ್ಬರು ತಮ್ಮ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ತಂಡದ ಸ್ಕೋರ್ ಅನ್ನು 300ರ ಗಡಿಗೆ ಕೊಂಡೊಯ್ದರು.