ಬೆಂಗಳೂರು:ಸನ್ರೈಸರ್ಸ್ ಹೈದರಾಬಾದ್ ತಂಡ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ತೋರಿ ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ತಂಡದ ಟ್ರಾವಿಸ್ ಹೆಡ್ ಅವರ ವೇಗದ ಶತಕ ಮತ್ತು ಹೆನ್ರಿಚ್ ಕ್ಲಾಸೆನ್ ಅವರ ಅರ್ಧಶತಕದ ನೆರವಿನಿಂದ 20 ಓವರ್ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 287 ರನ್ ಪೇರಿಸಿತು.
ಐಪಿಎಲ್ನ ಇದೇ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಹೈದರಾಬಾದ್ 277 ರನ್ ಗಳಿಸಿತ್ತು. ಇದು ಐಪಿಎಲ್ನ ಅತ್ಯಧಿಕ ಸ್ಕೋರ್ ಆಗಿತ್ತು. ಆದರೆ ಇಂದು ತನ್ನದೇ ಆದ ಹಳೆಯ ದಾಖಲೆಯನ್ನು ಅಳಿಸಿ ಹಾಕಿದೆ.
ವೇಗದ ಬೌಲರ್ ಲಾಕಿ ಫರ್ಗುಸನ್ ಆರ್ಸಿಬಿ ಪರ 2 ವಿಕೆಟ್ ಪಡೆದ 52 ರನ್ ಬಿಟ್ಟು ಕೊಡುವ ಮೂಲಕ ತಂಡದ ಯಶಸ್ವಿ ಬೌಲರ್ ಎನಿಸಿಕೊಂಡಿದ್ದಾರೆ. ಟಾಪ್ಲೆ 68, ವೈಶಾಕ್ 64 ರನ್ ಬಿಟ್ಟುಕೊಡುವ ಮೂಲಕ ದುಬಾರಿ ಬೌಲರ್ ಎನಿಸಿಕೊಂಡರು.
ಆರ್ಸಿಬಿ ಪ್ರಸಕ್ತ ಋತುವಿನಲ್ಲಿ ಇದುವರೆಗೂ 6 ಪಂದ್ಯಗಳನ್ನಾಡಿದ್ದು, ಅದರಲ್ಲಿ ಕೇವಲ 1ರಲ್ಲಿ ಮಾತ್ರ ಗೆಲುವು ಸಾಧಿಸಿದೆ. ಕಳೆದ 4 ಪಂದ್ಯಗಳಲ್ಲಿ ಸತತವಾಗಿ ಸೋಲು ಕಂಡಿದೆ. ಈ ಪಂದ್ಯವನ್ನು ಶತಾಯಗತಾಯ ಗೆಲ್ಲುವ ಮೂಲಕ ಗೆಲುವಿನ ಟ್ರ್ಯಾಕ್ಗೆ ಮರಳಲು ಯೋಜನೆ ರೂಪಿಸಿರುವ ತಂಡ 1 ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ಪಂದ್ಯದಿಂದ ಹೊರಗಿಡಲಾಗಿದ್ದು, ಅವರ ಸ್ಥಾನಕ್ಕೆ ಫರ್ಗುಸನ್ ಅವರನ್ನು ಆಯ್ಕೆ ಮಾಡಿದೆ.