ಚೆನ್ನೈ: ಬಾಂಗ್ಲಾದೇಶದ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತದ ವಿಕೆಟ್ ಕೀಪರ್ ಕಮ್ ಬ್ಯಾಟರ್ ರಿಷಭ್ ಪಂತ್ ಭರ್ಜರಿ ಶತಕ ಸಿಡಿಸಿದ್ದಾರೆ. ಮೂರನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡ ಪಂತ್ ಬಿರುಸಿನ ಬ್ಯಾಟಿಂಗ್ನೊಂದಿಗೆ 124 ಎಸೆತಗಳಲ್ಲಿ ಶತಕ ಪೂರೈಸಿದರು.
632 ದಿನಗಳ ಬಳಿಕ ಶತಕ:ಡಿಸೆಂಬರ್ 30, 2022 ರಂದು ಹೊಸ ವರ್ಷಾಚರಣೆಗೆಂದು ದಿಲ್ಲಿಯಿಂದ ಹುಟ್ಟೂರು ರೂರ್ಕಿಗೆ ಹೋಗುತ್ತಿದ್ದಾಗ ಪಂತ್ ಪ್ರಯಾಣಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಹೊತ್ತಿ ಉರಿದಿತ್ತು. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಂತ್ ಕ್ರಿಕೆಟ್ನಿಂದ ದೂರ ಉಳಿದಿದ್ದರು. ಗಾಯದಿಂದ ಚೇತರಿಸಿಕೊಳ್ಳಲು ಕ್ರಿಕೆಟ್ಗೆ ಮರಳಲು ಪಂತ್ 15 ತಿಂಗಳು ಸಮಯ ತೆಗೆದುಕೊಂಡಿದ್ದರು. ಅಪಘಾತದ ಬಳಿಕ ಅಂದ್ರೆ 638 ದಿನಗಳ ಬಳಿಕ ಪಂತ್ ಅವರಿಗೆ ಇದು ಮೊದಲ ಟೆಸ್ಟ್ ಪಂದ್ಯವಾಗಿದೆ.
ಇದರಲ್ಲಿ ಭರ್ಜರಿ ಕಮ್ಬ್ಯಾಕ್ ಮಾಡಿರುವ ಪಂತ್ ಆಕರ್ಷಕ ಬ್ಯಾಟಿಂಗ್ ಮೂಲಕ ಸೆಂಚುರಿ ಸಿಡಿಸಿದ್ದಾರೆ. ಒಟ್ಟು 128 ಎಸೆತಗಳನ್ನು ಎದುರಿಸಿ 4 ಸಿಕ್ಸರ್ ಮತ್ತು 13 ಬೌಂಡರಿ ಸಹಾಯದೊಂದಿಗೆ 109 ರನ್ ಗಳಿಸಿ ಮೆಹದಿ ಹಸನ್ ಎಸೆತದಲ್ಲಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.