ಮೆಲ್ಬೋರ್ನ್:ಭೀಕರ ರಸ್ತೆ ಅಪಘಾತದಲ್ಲಿ ಅದೃಷ್ಟವಶಾತ್ ಪಾರಾಗಿ ಒಂದು ವರ್ಷದಿಂದ ವೃತ್ತಿಪರ ಕ್ರಿಕೆಟ್ನಿಂದ ದೂರ ಉಳಿದಿರುವ ರಿಷಬ್ ಪಂತ್ ಟಿ20 ವಿಶ್ವಕಪ್ ವೇಳೆಗೆ ಟೀಂ ಇಂಡಿಯಾವನ್ನು ಸೇರಿಕೊಳ್ಳುವ ಸಾಧ್ಯತೆ ಇದೆ. 17ನೇ ಆವೃತ್ತಿಯ ಐಪಿಎಲ್ನಲ್ಲೂ ಪೂರ್ಣ ಪ್ರಮಾಣದಲ್ಲಿ ಭಾಗವಹಿಸುವ ಕುರಿತು ತಂಡದ ಆಡಳಿತ ಮಂಡಳಿ ಸುಳಿವು ನೀಡಿದೆ.
ಕ್ರೀಡಾ ಮಾಧ್ಯಮವೊಂದರ ಜೊತೆ ಬುಧವಾರ ಮಾತನಾಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕ್ಕಿ ಪಾಂಟಿಂಗ್, "ಇಂಡಿಯನ್ ಪ್ರೀಮಿಯರ್ ಲೀಗ್ನ 17ನೇ ಆವೃತ್ತಿಯಲ್ಲಿ ಕ್ರಿಕೆಟರ್ ರಿಷಬ್ ಪಂತ್ ಆಡುವ ವಿಶ್ವಾಸ ಹೊಂದಿದ್ದಾರೆ. ಆದರೆ, ಬ್ಯಾಟರ್ ಆಗಿ ಮಾತ್ರವೇ ಅಥವಾ ವಿಕೆಟ್ ಕೀಪರ್ ಆಗಿಯೂ ಕಣಕ್ಕಿಳಿಯಲಿದ್ದಾರೆಯೇ ಎಂಬುದು ಖಚಿತವಾಗಬೇಕಿದೆ" ಎಂದರು.
ಇಂಪ್ಯಾಕ್ಟ್ ಪ್ಲೇಯರ್?:"ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡಿರುವ ಪಂತ್ ಓಡಾಡುತ್ತಿರುವ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಗಮನಿಸಿರಬಹುದು. ಇನ್ನು ಕೆಲವೇ ವಾರಗಳಲ್ಲಿ ಐಪಿಎಲ್ ಆರಂಭವಾಗುವ ಸಾಧ್ಯತೆ ಇದೆ. ಹೀಗಾಗಿ ಅವರನ್ನು ಎಡಗೈ ಬ್ಯಾಟರ್ ಆಗಿ ತಂಡಕ್ಕೆ ಸೇರಿಸುವ ಬಗ್ಗೆ ವಿಶ್ವಾಸ ಹೊಂದಿದ್ದೇವೆ. ಎಲ್ಲ 14ರಲ್ಲಿ ಅಲ್ಲದೇ ಇದ್ದದ್ದರೂ 10 ಪಂದ್ಯಗಳಲ್ಲಿ ಅವರು ಆಡಲಿದ್ದಾರೆ. ಇಲ್ಲವಾದಲ್ಲಿ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಳಸಿಕೊಳ್ಳುತ್ತೇವೆ" ಎಂದು ಹೇಳಿದರು.