Rohit Sharma Ignored Dhoni Advice: ಟೀಮ್ ಇಂಡಿಯಾದ ನಾಯಕ ಮತ್ತು ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಏಕದಿನ ಸ್ವರೂಪದಲ್ಲಿ ಒಂದಕ್ಕಿಂತ ಹೆಚ್ಚು ದ್ವಿಶತಕ ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಬರೆದಿದ್ದಾರೆ. ಹಿಟ್ಮ್ಯಾನ್ ಮೊದಲ ದ್ವಿಶತಕ ಆಸ್ಟ್ರೇಲಿಯಾ ವಿರುದ್ಧ, 2 ಮತ್ತು 3ನೇ ದ್ವಿಶತಕವನ್ನು ಶ್ರೀಲಂಕಾ ವಿರುದ್ಧ ಸಿಡಿಸಿದ್ದರು.
ರೋಹಿತ್ ತಮ್ಮ ಮೊದಲ ದ್ವಿಶತಕದ ಬಗ್ಗೆ ಆಸಕ್ತಿದಾಯಕ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ರವಿಚಂದ್ರನ್ ಅಶ್ವಿನ್ ಅವರೊಂದಿಗಿನ ಇನ್‌ಸ್ಟಾಗ್ರಾಮ್ ಲೈವ್ ಸೆಷನ್ ವೇಳೆ, ನಾಯಕ ಎಂಎಸ್ ಧೋನಿ ಅವರ ಸಲಹೆಯನ್ನು ನಿರ್ಲಕ್ಷಿಸಿದ್ದೆ ಎಂದು ರೋಹಿತ್ ಹೇಳಿಕೊಂಡಿದ್ದಾರೆ.
ಧೋನಿ ಕೊಟ್ಟ ಸಲಹೆ ಏನು?:ನವೆಂಬರ್ 2013ರಲ್ಲಿ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶರ್ಮಾ ತಮ್ಮ ಮೊದಲ ದ್ವಿಶತಕ ಗಳಿಸಿದ್ದರು. ಈ ಪಂದ್ಯದಲ್ಲಿ ರೋಹಿತ್ ಮತ್ತು ಶಿಖರ್ ಧವನ್ ಆರಂಭಿಕರಾಗಿ ಬ್ಯಾಟಿಂಗ್‌ಗೆ ಬಂದಿದ್ದರು. ಧವನ್ 60 ರನ್ ಗಳಿಸಿ ಔಟಾದರು. ಬಳಿಕ ಬಂದ ಆಟಗಾರರಾದ ವಿರಾಟ್ ಕೊಹ್ಲಿ (0), ಸುರೇಶ್ ರೈನಾ (28) ಮತ್ತು ಯುವರಾಜ್ ಸಿಂಗ್ (12) ಬೇಗನೆ ಪೆವಿಲಿಯನ್ ಸೇರಿದ್ದರು. ಈ ವೇಳೆ ಭಾರತ 34ನೇ ಓವರ್‌ಗೆ 207ರನ್ಗಳಿಸಿ ಪ್ರಮುಖ 4 ವಿಕೆಟ್ಗಳನ್ನು ಕಳೆದುಕೊಂಡಿತ್ತು. ನಂತರ ಆರನೇ ಕ್ರಮಾಂಕದಲ್ಲಿ ಧೋನಿ ಬ್ಯಾಟಿಂಗ್‌ಗೆ ಬಂದಿದ್ಧರು.