ಹೈದರಾಬಾದ್: ಟೀಂ ಇಂಡಿಯಾ ಇತ್ತೀಚೆಗೆ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಬಾಂಗ್ಲಾದೇಶವನ್ನು 2-0 ಮತ್ತು ನಂತರ ಟಿ20 ಸರಣಿಯಲ್ಲಿ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿತ್ತು. ಇದೀಗ ರೋಹಿತ್ ಪಡೆ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗಿದೆ. ತವರಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಭಾರತ ಮತ್ತು ನ್ಯೂಜಿಲೆಂಡ್ 3 ಪಂದ್ಯಗಳನ್ನು ಆಡಲಿವೆ. ಮೊದಲ ಪಂದ್ಯ ಅಕ್ಟೋಬರ್ 16 ಬುಧವಾರ ಬೆಂಗಳೂರಿನಲ್ಲಿ ನಡೆಯಲಿದೆ. ಎರಡನೇ ಟೆಸ್ಟ್ ಅಕ್ಟೋಬರ್ 24ರಿಂದ ಪುಣೆಯಲ್ಲಿ ನಡೆಯಲಿದೆ, ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ನವೆಂಬರ್ 1 ರಿಂದ ಮುಂಬೈನಲ್ಲಿ ಆಯೋಜಿಸಲಾಗಿದೆ.
ಈ ಮೂರು ಪಂದ್ಯಗಳ ಸರಣಿ ಭಾರತದ ಪಾಲಿಗೆ ಮಹತ್ವದಾಗಿದ್ದು, ಸರಣಿ ಕ್ಲೀನ್ಸ್ವೀಪ್ ಮಾಡಿದರೆ ವಿಶ್ವ ಟೆಸ್ಟ್ ಚಾಂಪಿಯನಶಿಪ್ ಫೈನಲ್ಗೆ ಪ್ರವೇಶ ಪಡೆಯಲಿದೆ. ಮತ್ತೊಂದೆಡೆ ನಾಯಕ ರೋಹಿತ್ ಶರ್ಮಾಗೂ ಇದು ಮಹತ್ವಾಗಿದ್ದು ಮೂರು ದಾಖಲೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಹಾಗಾದ್ರೆ ರೋಹಿತ್ ಶರ್ಮಾ ಯಾವ ದಾಖಲೆಗಳನ್ನು ಮುರಿಯಲಿದ್ದಾರೆ ಎಂಬುದನ್ನು ಇಲ್ಲಿ ತಿಳಿಯೋಣ.
ಅತೀ ಹೆಚ್ಚು ಪಂದ್ಯ ಗೆದ್ದ ದಾಖಲೆ:ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಭಾರತ ಕ್ಲೀನ್ ಸ್ವೀಪ್ ಮಾಡಿದರೆ ಕಡಿಮೆ ಪಂದ್ಯಗಳಲ್ಲಿ 15 ಮ್ಯಾಚ್ ಗೆದ್ದ ನಾಯಕನಾಗಿ ದಾಖಲೆ ಬರೆಯಲಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಈವರೆಗೆ 12 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಕಿವೀಸ್ ವಿರುದ್ಧ 3 ಪಂದ್ಯ ಗೆದ್ದರೇ 21 ಪಂದ್ಯಗಳಲ್ಲಿ 15 ಗೆಲುವು ಸಾಧಿಸಿದ ನಾಯಕನಾಗಿ, ವಿರಾಟ್ ಕೊಹ್ಲಿ (22 ಪಂದ್ಯ 14 ಗೆಲುವು) ಮತ್ತು ಅಜರುದ್ಧೀನ್ (47 ಪಂದ್ಯ 14 ಗೆಲುವು) ಅವರನ್ನು ಹಿಂದಿಕ್ಕಲಿದ್ದಾರೆ.