ಕಾನ್ಪುರ (ಉತ್ತರಪ್ರದೇಶ):ಭಾರತದ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ನಡುವೆಯೇ ಬಾಂಗ್ಲಾದೇಶದ ಆಲ್ರೌಂಡರ್ ಶಕೀಬ್ ಅಲ್ ಹಸನ್ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ. ಟಿ-20 ಮತ್ತು ಟೆಸ್ಟ್ ಕ್ರಿಕೆಟ್ನಿಂದ ದೂರ ಉಳಿಯುವುದಾಗಿ ಅವರು ತಿಳಿಸಿದ್ದಾರೆ.
ಶುಕ್ರವಾರದಿಂದ ಭಾರತ ವಿರುದ್ಧ 2ನೇ ಟೆಸ್ಟ್ ಆರಂಭವಾಗಲಿದ್ದು, ಅದಕ್ಕೂ ಮೊದಲು ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಕೀಬ್, ಟಿ-20 ವಿಶ್ವಕಪ್ನಲ್ಲಿ ನನ್ನ ಕೊನೆಯ ಪಂದ್ಯವನ್ನು ಆಡಿದ್ದೇನೆ. ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯುವ ಸರಣಿಯಲ್ಲಿ ಅವಕಾಶ ಸಿಗದೇ ಇದ್ದಲ್ಲಿ ಭಾರತ ವಿರುದ್ಧದ ಕೊನೆಯ ಪಂದ್ಯ ನನ್ನ ವೃತ್ತಿ ಜೀವನದ ಅಂತಿಮ ಪಂದ್ಯವಾಗಲಿದೆ ಎಂದು ಹೇಳಿದರು.
2026 ರ ವಿಶ್ವಕಪ್ಗೂ ಮೊದಲು ತಂಡ ಹೊಸ ಆಟಗಾರರ ಶೋಧ ನಡೆಸಬೇಕಿದ. ಹೀಗಾಗಿ ನಾನು ತಂಡದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ. ಈ ಬಗ್ಗೆ ನಾನು ಬಾಂಗ್ಲಾದೇಶ ಕ್ರಿಕೆಟ್ ಸಮಿತಿ (ಬಿಸಿಬಿ) ಜೊತೆಗೆ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದರು. ಯುಎಇ ಮತ್ತು ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಬಾಂಗ್ಲಾದೇಶ ಪರವಾಗಿ ಏಕದಿನದಲ್ಲಿ ಆಡಲಿದ್ದಾರೆ. ಇದು ಅವರ ಅಂತಿಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವೂ ಆಗಲಿದೆ.