ನ್ಯೂಯಾರ್ಕ್: ಟಿ20 ವಿಶ್ವಕಪ್ನ 4ನೇ ಪಂದ್ಯದಲ್ಲಿಂದು ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ನ್ಯೂಯಾರ್ಕ್ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಉಭಯ ತಂಡಗಳು T20 ವಿಶ್ವಕಪ್ ಅಭಿಯಾನ ಪ್ರಾರಂಭಿಸಲಿವೆ. ಈ ಕ್ರೀಡಾಂಗಣದಲ್ಲಿ ಇದೇ ಮೊದಲ ಅಧಿಕೃತ ಪಂದ್ಯವಾಗಿದೆ. ಇದಕ್ಕೂ ಮುನ್ನ ಇಲ್ಲಿ ಅಭ್ಯಾಸ ಪಂದ್ಯಗಳು ನಡೆದಿವೆ. ಈ ಹಿಂದೆ 2012ರಲ್ಲಿ ಶ್ರೀಲಂಕಾ ಟಿ20 ವಿಶ್ವಕಪ್ ಪ್ರಶಸ್ತಿ ಜಯಿಸಿತ್ತು. ದಕ್ಷಿಣ ಆಫ್ರಿಕಾ ಚೊಚ್ಚಲ ಟ್ರೋಫಿಗಾಗಿ ಕಾಯುತ್ತಿದೆ.
ಪಿಚ್ ವರದಿ:ಟಿ20 ವಿಶ್ವಕಪ್ಗಾಗಿ ನಿರ್ಮಾಣಗೊಂಡಿರುವ ನಸ್ಸೌ ಕೌಂಟಿ ಕ್ರಿಕೆಟ್ ಮೈದಾನದಲ್ಲಿ ಮೊದಲು ಬ್ಯಾಟ್ ಮಾಡುವ ತಂಡಕ್ಕೆ ಪಿಚ್ ನೆರವಾಗಿರಲಿದೆ. ಪಂದ್ಯ ಸಾಗುತ್ತಿದ್ದಂತೆ ಸ್ಪಿನ್ನರ್ಗಳು ಪಿಚ್ನ ಸಹಾಯ ಪಡೆಯಲಿದ್ದಾರೆ.
ಹೆಡ್ ಟು ಹೆಡ್:ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ಟಿ20ಯಲ್ಲಿ ಇದೂವರೆಗೂ 17 ಬಾರಿ ಮುಖಾಮುಖಿಯಾಗಿದ್ದು ಈ ಪೈಕಿ ಶ್ರೀಲಂಕಾ 12 ಪಂದ್ಯಗಳಲ್ಲಿ ಗೆದ್ದು ಮೇಲುಗೈ ಸಾಧಿಸಿದ್ದರೇ, ದಕ್ಷಿಣ ಆಫ್ರಿಕಾ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಪಂದ್ಯ ಆರಂಭದ ಸಮಯ:ರಾತ್ರಿ 8 ಗಂಟೆಗೆ