ನವದೆಹಲಿ:ಐಪಿಎಲ್ 2024ರ ಕ್ವಾಲಿಫೈಯರ್-2ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ರಾಜಸ್ಥಾನ ರಾಯಲ್ಸ್ ತಂಡವನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಹೈದರಾಬಾದ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಈ ಸೀಸನ್ನಲ್ಲಿ ಹೈದರಾಬಾದ್‌ನ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಅನೇಕ ಅದ್ಭುತ ಇನ್ನಿಂಗ್ಸ್‌ಗಳನ್ನು ಆಡುವ ಮೂಲಕ ತಮ್ಮ ತಂಡದ ಗೆಲುವಿಗೆ ಗಮನಾರ್ಹ ಕೊಡುಗೆ ನೀಡಿದ್ದಾರೆ.
ರಾಜಸ್ಥಾನ ವಿರುದ್ಧದ ಕ್ವಾಲಿಫೈಯರ್-2 ಪಂದ್ಯದಲ್ಲಿ ಅವರು ಬ್ಯಾಟ್‌ನಿಂದ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆದರೆ, ಬೌಲಿಂಗ್ನಲ್ಲಿ ಅವರು 4 ಓವರ್‌ಗಳಲ್ಲಿ 2 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಅದ್ಭುತ ಪ್ರದರ್ಶನ ತೋರಿದರು. ಪ್ರಮುಖ ವಿಕೆಟ್‌ಗಳನ್ನು ಕಬಳಿಸುವ ಮೂಲಕ ಅಭಿಷೇಕ್ ಶರ್ಮಾ ಪಂದ್ಯದಲ್ಲಿ ಮತ್ತೊಮ್ಮೆ ಮಿಂಚಿದ್ದರು.
ಅಭಿಷೇಕ್ ಆಟದ ಬಗ್ಗೆ ಸುರೇಶ್ ರೈನಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಭಿಷೇಕ್ ಶರ್ಮಾ ಬಗ್ಗೆ ರೈನಾ, ''ಅಭಿಷೇಕ್ ಶರ್ಮಾಗೆ ತರಬೇತಿ ನೀಡುತ್ತಿರುವವರು ಯಾರು ಗೊತ್ತಾ? ಅದು ಯುವರಾಜ್ ಸಿಂಗ್. 2011ರ ವಿಶ್ವಕಪ್‌ನ ಹೀರೋ, ಇದರೊಂದಿಗೆ ಯುವಿ ಭಾರತಕ್ಕೆ ಉದಯೋನ್ಮುಖ ನಕ್ಷತ್ರವನ್ನು ನೀಡಿದ್ದಾರೆ'' ಎಂದು ಹೇಳಿದ್ದಾರೆ. ಆದರೆ, ಮುಂದಿನ ವಾರದಿಂದ ಅಮೆರಿಕ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿರುವ ವಿಶ್ವಕಪ್‌ಗೆ ಭಾರತ ತಂಡದಲ್ಲಿ ರೈಸಿಂಗ್ ಸ್ಟಾರ್ ಅಭಿಷೇಕ್ ಶರ್ಮಾ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ ಎಂದು ರೈನಾ ಬೇಸರ ವ್ಯಕ್ತಪಡಿಸಿದ್ದಾರೆ.