ಕರ್ನಾಟಕ

karnataka

ETV Bharat / sports

ಟಿ20 ವಿಶ್ವಕಪ್ ಟೂರ್ನಿಗಾಗಿ 15 ಸದಸ್ಯರ ತಂಡ ಪ್ರಕಟಿಸಿದ ಪಾಕಿಸ್ತಾನ: ಬಾಬರ್ ಅಜಮ್ ನಾಯಕ - Pakistan Team - PAKISTAN TEAM

T20 World Cup 2024: ಪಾಕಿಸ್ತಾನ ಕ್ರಿಕೆಟ್ ಮಂಡಳಿ ಟಿ20 ವಿಶ್ವಕಲ್ ಟೂರ್ನಿಗಾಗಿ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಬಾಬರ್ ಅಜಮ್ ತಂಡವನ್ನು ಮುನ್ನಡೆಸಲಿದ್ದಾರೆ.

T20 World Cup 2024: Pakistan Cricket Board Announce 15-Member Squad, Babar Named Captain
ಸಂಗ್ರಹ ಚಿತ್ರ (twitter)

By ETV Bharat Karnataka Team

Published : May 25, 2024, 3:53 PM IST

ಹೈದರಾಬಾದ್: ಜೂನ್ 2 ರಿಂದ ಕೆರಿಬಿಯನ್ ದ್ವೀಪಗಳು ಮತ್ತು ಅಮೆರಿಕದಲ್ಲಿ ನಡೆಯಲಿರುವ ಮುಂಬರುವ ಅಂತಾರಾಷ್ಟ್ರೀಯ ಟಿ20 ವಿಶ್ವಕಪ್ ಟೂರ್ನಿಗಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಸ್ಟಾರ್ ಬ್ಯಾಟರ್ ಬಾಬರ್ ಅಜಮ್ ನಾಯಕತ್ವದಲ್ಲಿ ತಂಡ ಮೈದಾನಕ್ಕೆ ಇಳಿಯಲಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದ ಎಡಗೈ ವೇಗಿ ಮೊಹಮ್ಮದ್ ಅಮೀರ್ ಮತ್ತು ಆಲ್‌ರೌಂಡರ್ ಇಮಾದ್ ವಾಸಿಮ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಮೀರ್ ನಾಲ್ಕು ವರ್ಷಗಳ ಹಿಂದೆ ನಿವೃತ್ತಿ ಘೋಷಿಸಿದ್ದರು. ಇಮಾದ್ ವಾಸಿಂ ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಇವರ ಪುನರಾಗಮನ ತಂಡಕ್ಕೆ ಬಲ ತಂದಿದೆ. ಇವರೊಂದಿಗೆ ಕಳೆದ ವಿಶ್ವಕಪ್ ಮುಂದಾಳತ್ವ ವಹಿಸಿದ್ದ ತಂಡದ ಎಂಟು ಆಟಗಾರರನ್ನು ಉಳಿಸಿಕೊಂಡಿದೆ. ಆಲ್ ರೌಂಡರ್ ಸಲ್ಮಾನ್ ಅಲಿ ಅಘಾ ಮತ್ತು ವೇಗಿ ಮುಹಮ್ಮದ್ ಇರ್ಫಾನ್ ಖಾನ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಸ್ಪಿನ್ನರ್ ಅಬ್ರಾರ್ ಅಹ್ಮದ್, ವಿಕೆಟ್ ಕೀಪರ್ ಕಂ ಬ್ಯಾಟರ್ ಅಜಮ್ ಖಾನ್, ವೇಗಿ ಮೊಹಮ್ಮದ್ ಅಬ್ಬಾಸ್ ಆಫ್ರಿದಿ, ಸೌತ್‌ಪಾವ್ ಓಪನರ್ ಸೈಮ್ ಅಯೂಬ್ ಮತ್ತು ಉಸ್ಮಾನ್ ಖಾನ್ ಸೇರಿದಂತೆ 15 ಆಟಗಾರರು ತಮ್ಮ ಮೊದಲ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸಲಿದ್ದಾರೆ.

"ಇದು ಯುವ ಮತ್ತು ಅನುಭವದ ಮಿಶ್ರಣವನ್ನು ಹೊಂದಿರುವ ಅತ್ಯಂತ ಪ್ರತಿಭಾವಂತ ಮತ್ತು ಸಮತೋಲಿತ ತಂಡವಾಗಿದೆ. ಈ ಆಟಗಾರರು ಕಳೆದ ಕೆಲವು ದಿನಗಳಿಂದ ಒಟ್ಟಿಗೆ ಅಭ್ಯಾಸ ಮಾಡಿದ್ದು, ಮುಂಬರುವ ಅಂತಾರಾಷ್ಟ್ರೀಯ ಟಿ20 ವಿಶ್ವಕಪ್ ಟೂರ್ನಿಗಾಗಿ ಸಿದ್ಧಗೊಂಡಿದ್ದಾರೆ" ಎಂದು ಪಿಸಿಬಿ ಹೇಳಿದೆ.

"ಬಿಗ್ ಬ್ಯಾಷ್ ಲೀಗ್‌ನಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ಪರ ಆಡುತ್ತಿರುವ ಹ್ಯಾರಿಸ್ ರೌಫ್, ಗಾಯದಿಂದ ಚೇತರಿಸಿಕೊಂಡಿದ್ದು ತಂಡಕ್ಕೆ ಮರಳಿದ್ದಾರೆ. ಸದ್ಯ ಅವರು ಸಂಪೂರ್ಣ ಫಿಟ್ ಆಗಿದ್ದು, ನೆಟ್ಸ್‌ನಲ್ಲಿ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ. ಮುಂಬರುವ ಪಂದ್ಯಗಳಲ್ಲಿ ತಮ್ಮ ಸಾಮರ್ಥ್ಯ ತೋರ್ಪಡಿಸಿಲಿದ್ದಾರೆ ಎಂಬ ವಿಶ್ವಾಸ ಇದೆ ಎಂದು ಸಹ ಪಿಸಿಬಿ ತಿಳಿಸಿದೆ.

ಪಾಕಿಸ್ತಾನ ಮತ್ತು ಭಾರತ A ಗುಂಪಿನಲ್ಲಿದ್ದು, ಜೂನ್ 9 ರಂದು ಬಹುನಿರೀಕ್ಷಿತ ಉಭಯ ತಂಡಗಳ ಪಂದ್ಯ ನಡೆಯಲಿದೆ. ಅದಕ್ಕೂ ಮುನ್ನ ಪಾಕ್​ ಜೂನ್ 6ರಂದು ಯುಎಸ್‌ಎ ವಿರುದ್ಧ ಪಂದ್ಯವನ್ನಾಡುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭವಾಗಲಿದೆ. ಜೂನ್ 11ರಂದು ಕೆನಡಾ ವಿರುದ್ಧ ಪಂದ್ಯವನ್ನಾಡಲಿದ್ದು, ಲೀಗ್ ಹಂತದಲ್ಲಿ ಪಾಕಿಸ್ತಾನ ಕೊನೆಯ ಪಂದ್ಯದಲ್ಲಿ ಜೂನ್ 16ರಂದು ಐರ್ಲೆಂಡ್ ತಂಡದ ವಿರುದ್ಧ ಸೆಣೆಸಲಿದೆ.

ಪಾಕಿಸ್ತಾನದ ತಂಡ: ಬಾಬರ್ ಅಜಮ್ (ನಾಯಕ), ಅಬ್ರಾರ್ ಅಹ್ಮದ್, ಅಜಮ್ ಖಾನ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಜ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾಹ್ಮಾನ್ ಅಫ್ರಿದಿ, ಉಸ್ಮಾನ್​ ಖಾನ್​

ಇದನ್ನೂ ಓದಿ:T20 ವಿಶ್ವಕಪ್​ಗಾಗಿ ವೀಕ್ಷಕ ವಿವರಣೆಗಾರರ ಪಟ್ಟಿ ಬಿಡುಗಡೆ ಮಾಡಿದ ಐಸಿಸಿ - T20 World Cup 2024

ABOUT THE AUTHOR

...view details