Tilak Varma T20 Record: ಟೀಂ ಇಂಡಿಯಾದ ಯುವ ಬ್ಯಾಟರ್ ತಿಲಕ್ ವರ್ಮಾ ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿ (SMAT) 2024ರಲ್ಲಿ ಹೈದರಾಬಾದ್ ತಂಡದ ನಾಯಕರಾಗಿರುವ ತಿಲಕ್, T20 ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ ಬರೆದಿದ್ದಾರೆ.
ರಾಜ್ಕೋಟ್ ಮೈದಾನದಲ್ಲಿ ಮೇಘಾಲಯದ ವಿರುದ್ಧದ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ತಿಲಕ್ 67 ಎಸೆತಗಳಲ್ಲಿ 151 ರನ್ ಚಚ್ಚಿದರು. ಅವರ ಈ ಇನ್ನಿಂಗ್ಸ್‌ನಲ್ಲಿ 14 ಬೌಂಡರಿಗಳು ಮತ್ತು 10 ಸಿಕ್ಸರ್‌ಗಳು ಸೇರಿದ್ದವು. ತಿಲಕ್ ಬೌಂಡರಿಗಳ ಮೂಲಕವೇ 116 ರನ್ ಕಲೆಹಾಕಿದರು. ಮೊದಲಿಗೆ 28 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದ ಅವರು 51 ಎಸೆತಗಳಲ್ಲಿ ಶತಕ ಪೂರೈಸಿದರು.
ಈ ಮೂಲಕ ಟಿ20ಯಲ್ಲಿ 150 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡರು. ಇದಷ್ಟೇ ಅಲ್ಲದೇ, ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅತಿ ಹೆಚ್ಚು ವೈಯಕ್ತಿಕ ಸ್ಕೋರ್ ಗಳಿಸಿದ ಮತ್ತು ಪಂದ್ಯ ವೊಂದರಲ್ಲೇ ಅತೀ ಹೆಚ್ಚು 24 ಬೌಂಡರಿ ಸಿಡಿಸಿದ ಬ್ಯಾಟರ್ ಆಗಿಯೂ ದಾಖಲೆ ಬರೆದಿದ್ದಾರೆ. ಇವುಗಳೊಂದಿಗೆ ಟಿ-20 ಸ್ವರೂಪದಲ್ಲಿ ಸತತ ಮೂರು ಶತಕಗಳನ್ನು ಸಿಡಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಅಪರೂಪದ ದಾಖಲೆಯನ್ನೂ ಬರೆದಿದ್ದಾರೆ.