ಕರ್ನಾಟಕ

karnataka

ETV Bharat / sports

T20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್​ 10 ಬೌಲರ್‌ಗಳು ಯಾರ್​ ಗೊತ್ತಾ? - T20 World Cup 2024

ಬಾಂಗ್ಲಾದೇಶದ ಆಲ್‌ರೌಂಡರ್ ಶಕೀಬ್ ಅಲ್ ಹಸನ್ T20 ವಿಶ್ವಕಪ್‌ಗಳಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

Top 10 bowlers with highest wickets in T20 World Cup history
ವಿಕೆಟ್ ಪಡೆದ ನಂತರ ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ಸಹ ಆಟಗಾರರೊಂದಿಗೆ ಸಂಭ್ರಮಿಸುತ್ತಿರುವುದು. (IANS)

By ETV Bharat Karnataka Team

Published : May 28, 2024, 7:45 PM IST

Updated : May 28, 2024, 8:05 PM IST

ನವದೆಹಲಿ:ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್​ 10 ಬೌಲರ್‌ಗಳ ಪಟ್ಟಿ ಇಲ್ಲಿದೆ. ಈ ಪಟ್ಟಿಯಲ್ಲಿ ಬಾಂಗ್ಲಾದೇಶದ ಬೌಲರ್ ಅಗ್ರ ಸ್ಥಾನ ಅಲಂಕರಿಸಿದ್ದಾರೆ. ಪಾಕಿಸ್ತಾನದ ಬೌಲರ್‌ಗಳು ಈ ಪಟ್ಟಿಯಲ್ಲಿ ಅತಿ ಹೆಚ್ಚು ಪ್ರಾಬಲ್ಯ ಹೊಂದಿದ್ದು, ಮೂವರು ಬೌಲರ್‌ಗಳು ಅಗ್ರ ಸ್ಥಾನದಲ್ಲಿದ್ದಾರೆ.

ಶಕೀಬ್ ಅಲ್ ಹಸನ್: ಬಾಂಗ್ಲಾದೇಶದ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಪ್ರಸ್ತುತ T20 ವಿಶ್ವಕಪ್‌ಗಳಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. 36 ಪಂದ್ಯಗಳ 35 ಇನ್ನಿಂಗ್ಸ್‌ಗಳಲ್ಲಿ 47 ವಿಕೆಟ್ ಪಡೆಯುವ ಮೂಲಕ ಉತ್ತಮ ಪ್ರದರ್ಶನ ನೀಡಿದ್ದಾರೆ. 2021ರ ಆವೃತ್ತಿಯಲ್ಲಿ ಪಪುವಾ ನ್ಯೂಗಿನಿಯಾ ವಿರುದ್ಧ 9 ರನ್​ಗಳಿಗೆ 4 ವಿಕೆಟ್‌ ಕಬಳಿಸಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಇದುವರೆಗಿನ ಟಿ20 ವಿಶ್ವಕಪ್‌ನ ಎಲ್ಲಾ 8 ಆವೃತ್ತಿಗಳಲ್ಲಿ ಭಾಗವಹಿಸಿರುವ ಆಟಗಾರರಲ್ಲಿ ಶಕೀಬ್ ಕೂಡ ಸೇರಿದ್ದಾರೆ. ಈಗ ಅವರು ಟಿ20 ವಿಶ್ವಕಪ್‌ನ 9ನೇ ಸೀಸನ್​ನಲ್ಲಿ ತಮ್ಮ ಛಾಪು ಮೂಡಿಸಲು ಸಿದ್ಧತೆ ನಡೆಸಿದ್ದಾರೆ.

ಶಾಹಿದ್ ಅಫ್ರಿದಿ: ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಆಗಿ ಪಾಕಿಸ್ತಾನದ ಮಾಜಿ ನಾಯಕ ಮತ್ತು ಆಲ್ ರೌಂಡರ್ ಶಾಹಿದ್ ಅಫ್ರಿದಿ ಇದ್ದಾರೆ. 34 ಪಂದ್ಯಗಳ 34 ಇನ್ನಿಂಗ್ಸ್‌ಗಳಲ್ಲಿ 39 ವಿಕೆಟ್‌ಗಳನ್ನು ಪಡೆದಿದ್ದಾರೆ. 11 ರನ್ ನೀಡಿ 4 ವಿಕೆಟ್ ಕಬಳಿಸಿದ್ದು ಅಫ್ರಿದಿ ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ.

ಲಸಿತ್ ಮಾಲಿಂಗ:ಶ್ರೀಲಂಕಾದ ಮಾಜಿ ವೇಗದ ಬೌಲರ್ ಲಸಿತ್ ಮಾಲಿಂಗ ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂರನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಸ್ಥಾನ ಉಳಿಸಿಕೊಂಡಿದ್ದಾರೆ. ಮಾಲಿಂಗ 31 ಪಂದ್ಯಗಳಲ್ಲಿ 38 ವಿಕೆಟ್ ಪಡೆದಿದ್ದಾರೆ. 31 ರನ್‌ಗಳಿಗೆ 5 ವಿಕೆಟ್‌ ಕಬಳಿಸಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಮಾಲಿಂಗ ಟಿ20 ವಿಶ್ವಕಪ್‌ನಲ್ಲಿ ಐದು ವಿಕೆಟ್ ಕಬಳಿಸಿದ್ದಾರೆ.

ಸಯೀದ್ ಅಜ್ಮಲ್:ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಸ್ಪಿನ್ ಬೌಲರ್ ಸಯೀದ್ ಅಜ್ಮಲ್ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ನಾಲ್ಕನೇ ಬೌಲರ್ ಎನಿಸಿಕೊಂಡಿದ್ದಾರೆ. ಸಯೀದ್ 23 ಪಂದ್ಯಗಳ 23 ಇನ್ನಿಂಗ್ಸ್‌ಗಳಲ್ಲಿ 36 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಅವಧಿಯಲ್ಲಿ 19 ರನ್‌ಗಳಿಗೆ 4 ವಿಕೆಟ್‌ ಕಬಳಿಸಿದ್ದು ಅವರ ಅತ್ಯುತ್ತಮ ಸಾಧನೆಯಾಗಿದೆ.

ಅಜಂತಾ ಮೆಂಡಿಸ್: ಶ್ರೀಲಂಕಾದ ಮಾಜಿ ಸ್ಪಿನ್ ಬೌಲರ್ ಅಜಂತಾ ಮೆಂಡಿಸ್ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳಲ್ಲಿ 5ನೇ ಸ್ಥಾನದಲ್ಲಿದ್ದಾರೆ. ಅವರು 21 ಪಂದ್ಯಗಳಲ್ಲಿ 35 ವಿಕೆಟ್ ಪಡೆದಿದ್ದಾರೆ. ಈ ಅವಧಿಯಲ್ಲಿ 8 ರನ್‌ಗಳಿಗೆ 6 ವಿಕೆಟ್‌ ಕಬಳಿಸಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ.

ಉಮರ್ ಗುಲ್:ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳಲ್ಲಿ ಪಾಕಿಸ್ತಾನದ ಮಾಜಿ ಆಟಗಾರ ಉಮರ್ ಗುಲ್ 6ನೇ ಸ್ಥಾನದಲ್ಲಿದ್ದಾರೆ. ಅವರು 24 ಪಂದ್ಯಗಳಲ್ಲಿ 35 ವಿಕೆಟ್ ಪಡೆದಿದ್ದಾರೆ. 6 ರನ್‌ಗಳಿಗೆ 5 ವಿಕೆಟ್​ ಪಡೆದಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಅವರು ಪಡೆದಿರುವ 35 ವಿಕೆಟ್‌ಗಳಲ್ಲಿ 21 ವಿಕೆಟ್‌ ಅಂತಿಮ ಐದು ಓವರ್‌ಗಳಲ್ಲಿಯೇ ಬಂದಿವೆ.

ರವಿಚಂದ್ರನ್ ಅಶ್ವಿನ್:ಭಾರತದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 24 ಪಂದ್ಯಗಳಲ್ಲಿ 32 ವಿಕೆಟ್‌ಗಳೊಂದಿಗೆ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದಾರೆ. 11ಕ್ಕೆ 4 ವಿಕೆಟ್ ಪಡೆದಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ.

ಹಸರಂಗಾ:ಶ್ರೀಲಂಕಾದ ಲೆಗ್ ಸ್ಪಿನ್ನರ್ ಹಸರಂಗಾ ಟಿ20 ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದಾರೆ. 16 ಪಂದ್ಯಗಳಲ್ಲಿ 31 ವಿಕೆಟ್​ ಪಡೆದಿದ್ದಾರೆ. 8 ರನ್​ಗಳಿಗೆ 5 ವಿಕೆಟ್​ ಕಿತ್ತಿರುವುದು ಹಸರಂಗಾ ಅತ್ಯುತ್ತಮ ಪ್ರದರ್ಶನವಾಗಿದೆ. ಇನ್ನು ಸ್ಥಾನ 9 ಹಾಗೂ 10 ರಲ್ಲಿ ಕ್ರಮವಾಗಿ ಡೇಲ್ ಸ್ಟೇಯ್ನ್ ಮತ್ತು ಸ್ಟುವರ್ಟ್ ಬ್ರಾಡ್ ಇದ್ದಾರೆ.

ಇದನ್ನೂ ಓದಿ:ಮೊದಲ ಟಿ20 ವಿಶ್ವಕಪ್​ಗೆ ಅಣಿಯಾಗುತ್ತಿರುವ ಯುವ ಆಟಗಾರರು; ಚುಟುಕು ವಿಶ್ವಕಪ್‌ನಲ್ಲಿ ಇವರೇ ಟ್ರಂಪ್ ಕಾರ್ಡ್ - T20 World Cup 2024

Last Updated : May 28, 2024, 8:05 PM IST

ABOUT THE AUTHOR

...view details