Ind vs Aus, 3rd Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಮತ್ತೊಮ್ಮೆ ಅಬ್ಬರಿಸಿದ್ದಾರೆ. ಎರಡನೇ ದಿನವಾದ ಇಂದು 76 ರನ್ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಆಸ್ಟ್ರೇಲಿಯಾಗೆ ಅವರು ಆಸರೆಯಾದರು. ಭಾರತೀಯ ಬೌಲರ್‌ಗಳನ್ನು ದಂಡಿಸಿ, 152 ರನ್ ಬಾರಿಸಿ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಎರಡನೇ ಶತಕ ಸಂಪಾದಿಸಿದರು. ಕಳೆದ ಒಂದೂವರೆ ವರ್ಷದಲ್ಲಿ ಭಾರತದ ವಿರುದ್ಧ ಹೆಡ್ ಸಿಡಿಸಿದ ನಾಲ್ಕನೇ ಶತಕ ಇದಾಗಿದೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟಾರೆ 9ನೇ ಶತಕ: 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಶತಕ, 2023ರ ವಿಶ್ವಕಪ್‌ನ ಫೈನಲ್‌ನಲ್ಲಿ ಶತಕ, ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಶತಕ ಸಿಡಿಸಿದ ಹೆಡ್, ಇದೀಗ ಬ್ರಿಸ್ಬೇನ್‌ನ ಗಬ್ಬಾದಲ್ಲಿಯೂ ತಮ್ಮ ಬ್ಯಾಟಿಂಗ್ ಪರಾಕ್ರಮ ತೋರಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟಾರೆ 9ನೇ ಶತಕ ಪೂರ್ಣಗೊಳಿಸಿದ್ದಾರೆ.
0,0,0ಯಿಂದ 152 ರನ್: 115 ಎಸೆತಗಳನ್ನು ಎದುರಿಸಿದ ಹೆಡ್, 13 ಬೌಂಡರಿಗಳ ನೆರವಿನಿಂದ ಶತಕದಾಟವಾಡಿದರು. ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ವಿರುದ್ಧ ಅವರ ಮೂರನೇ ಶತಕ. ಗಬ್ಬಾದಲ್ಲಿ ಕಳೆದ ಮೂರು ಇನ್ನಿಂಗ್ಸ್‌ಗಳಲ್ಲಿ ಒಂದೇ ಒಂದು ರನ್ ಗಳಿಸಿದೇ ಶೂನ್ಯಕ್ಕೆ ನಿರ್ಗಮಿಸಿದ್ದರು. ಮೊದಲ ಎಸೆತದಲ್ಲಿ ಮೂರು ಬಾರಿ ರಾಯಲ್ ಡಕ್ ಔಟ್ ಆಗಿದ್ದರು. ಇದೀಗ ಶತಕ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ.