ಧರ್ಮಶಾಲಾ (ಹಿಮಾಚಲ ಪ್ರದೇಶ): ಆರ್‌ಸಿಬಿ ಸ್ಟಾರ್ ಬ್ಯಾಟ್ಸ್ಮನ್, ಭಾರತೀಯ ಕ್ರಿಕೆಟ್ನ ಸವ್ಯಸಾಚಿ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಂದು ಇತಿಹಾಸವನ್ನು ಬರೆದಿದ್ದಾರೆ. ಟಿ-20ಯಲ್ಲಿ 400 ಸಿಕ್ಸರ್‌ಗಳನ್ನು ಸಿಡಿಸಿದ 2ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಗುರುವಾರದ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.
ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಇದೀಗ ಭಾರತದ ಪ್ರಸ್ತುತ ನಾಯಕ ರೋಹಿತ್ ಶರ್ಮಾ ಅವರ ಗುಂಪನ್ನು ಸೇರಿಕೊಂಡಿದ್ದಾರೆ. ರೋಹಿತ್ ಶರ್ಮಾ T20 ಕ್ರಿಕೆಟ್‌ನಲ್ಲಿ 506 ಸಿಕ್ಸರ್‌ಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲೀಗ ವಿರಾಟ್ ಕೊಹ್ಲಿ ಕೂಡಾ ಸೇರಿಕೊಂಡಿದ್ದಾರೆ. ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 1000 ರನ್‌ಗಳನ್ನು ಗಳಿಸಿದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಒತ್ತಡದಲ್ಲಿ ಸ್ಥಿರ ಪ್ರದರ್ಶನ ನೀಡುವ ಅವರ ಸಾಮರ್ಥ್ಯವು ಯುವ ಪೀಳಿಗೆಯ ಬ್ಯಾಟ್ಸ್‌ಮನ್‌ಗಳಿಗೆ ಮಾದರಿಯಾಗಿದೆ.