ನವದೆಹಲಿ:ಇಲ್ಲಿನ ಐತಿಹಾಸಿಕ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವೆ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಮಳೆ ಪೀಡಿತ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕ್ರಿಕೆಟ್ ಇತಿಹಾಸದ ಪುಟದಲ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಈ ಪಂದ್ಯದಲ್ಲಿ 35ರನ್ ಪೂರೈಸಿದ ತಕ್ಷಣ, ವಿರಾಟ್ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದರು ದೊಡ್ಡ ದಾಖಲೆಗಳನ್ನು ಮಾಡಿದರು.
27,000 ರನ್:ಹೌದು ವಿರಾಟ್ ಕೊಹ್ಲಿ , ಕಾನ್ಪುರ ಟೆಸ್ಟ್‌ನಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ 47 ರನ್‌ಗಳ ಇನ್ನಿಂಗ್ಸ್ ಆಡಿದರು. ಈ ಇನ್ನಿಂಗ್ಸ್‌ನಲ್ಲಿ 35ನೇ ರನ್ ಗಳಿಸಿದ ತಕ್ಷಣ ವಿರಾಟ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27 ಸಾವಿರ ರನ್ ಪೂರೈಸಿದರು. ಸಚಿನ್ ತೆಂಡೂಲ್ಕರ್ ನಂತರ ಈ ಮೈಲಿಗಲ್ಲನ್ನು ತಲುಪಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು.