ಜೈಪುರ್ (ರಾಜಸ್ಥಾನ) :17ನೇ ಆವೃತ್ತಿ ಇಂಡಿಯನ್ ಪ್ರಿಮಿಯರ್ ಲೀಗ್ (ಐಪಿಎಲ್)ನಲ್ಲಿ ಮೊದಲ ಶತಕ ಸಿಡಿಸಿರುವ ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು ತಲುಪಿದ್ದಾರೆ.
ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂ ನಡೆಯುತ್ತಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 34 ರನ್ ಗಳಿಸುತ್ತಿದ್ದಂತೆ ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ 7500 ರನ್ ಪೂರೈಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೆ ಈವರೆಗೆ ಐಪಿಎಲ್ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರನಾಗಿ ಕೊಹ್ಲಿ (8) ಮೊದಲ ಸ್ಥಾನದಲ್ಲಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಹಲವು ದಾಖಲೆಗಳನ್ನು ಬರೆದಿರುವ ವಿರಾಟ್ ಕೊಹ್ಲಿ ತನ್ನ ದಾಖಲೆಗಳನ್ನು ಮುಂದುವರೆಸಿದ್ದಾರೆ.
ಐಪಿಎಲ್ನಲ್ಲಿ ಅತಿ ಹೆಚ್ಚು ರನ್ ಹೊಡೆದಿರುವ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 7500 ರನ್ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಪಂಜಾಬ್ ನಾಯಕ ಶಿಖರ್ ಧವನ್ ಇದುವರೆಗೆ 6755 ರನ್ ಬಾರಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿರುವ ಡೇವಿಡ್ ವಾರ್ನರ್ 6545 ರನ್, ನಾಲ್ಕನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ 6280 ರನ್ ಮತ್ತು ಸುರೇಶ್ ರೈನಾ 5528 ರನ್ ಗಳಿಸಿದ್ದಾರೆ.