India vs Australia Gabba Test:ಬಾರ್ಡರ್ - ಗವಾಸ್ಕರ್ ಟ್ರೋಫಿ ಭಾಗವಾಗಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಬ್ರಿಸ್ಬೇನ್‌ನ ಗಬ್ಬಾ ಮೈದಾನದಲ್ಲಿ ಮೂರನೇ ಟೆಸ್ಟ್ ಪಂದ್ಯ ನಡೆಯುತ್ತಿದೆ.
ಮಳೆ ಪೀಡಿತ ಈ ಪಂದ್ಯದಲ್ಲೂ ಆಸ್ಟ್ರೇಲಿಯಾ ಭರ್ಜರಿ ಪ್ರದರ್ಶನ ತೋರಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 445 ರನ್‌ಗಳಿಸಿದೆ. ಇದಕ್ಕುತ್ತರವಾಗಿ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 44 ರನ್ ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಅದರಲ್ಲೂ ಅನುಭವಿ ಬ್ಯಾಟರ್ ಆದ ವಿರಾಟ್ ಕೊಹ್ಲಿ ಮತ್ತೊಮ್ಮೆ ನಿರಾಸೆ ಮೂಡಿಸಿದರು. ಅಲ್ಪ ರನ್ಗಳಿಸಿ ಪೆವಿಲಿಯನ್ ಸೇರಿದರು. ಇದರ ಬೆನ್ನಲ್ಲೆ ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ನಿವೃತ್ತಿ ಕೂಗು ಕೇಳಿ ಬಂದಿದೆ.
ಅಭಿಮಾನಿಗಳಿಂದ ನಿವೃತ್ತಿಗೆ ಒತ್ತಾಯ:ಕೊಹ್ಲಿ ಕಳಪೆ ಪ್ರದರ್ಶನದಿಂದಾಗಿ ರೋಸಿ ಹೋದ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಭಾರತೀಯ ಕ್ರಿಕೆಟ್ ಸುಧಾರಣೆಗಾಗಿ ನೀವೂ ನಿವೃತ್ತಿ ತೆಗೆದುಕೊಳ್ಳುವುದು ಒಳ್ಳೆಯದು ಎಂದಿದ್ದಾರೆ. ಹೀಗಾದರೇ ವಿರಾಟ್, ಸಚಿನ್ ದಾಖಲೆ ಸಮೀಪಕ್ಕೂ ಹೋಗಲು ಸಾಧ್ಯವಿಲ್ಲ ಎಂದು ಬಳಕೆದಾರರು ಬರೆದುಕೊಂಡಿದ್ದಾರೆ. ಮತ್ತೊಬ್ಬರು 'ವಿರಾಟ್ ಕೊಹ್ಲಿ ರನ್ ಗಳಿಸುವ ಹಸಿವನ್ನು ಕಳೆದುಕೊಂಡಿದ್ದಾರೆ. ಬೇರೆ ಕಾರಣವಿಲ್ಲ' ಎಂದು ಟೀಕಿಸಿದ್ದಾರೆ.