Yuzvendra Chahal and Dhanashree Verma: ಕಳೆದ ವರ್ಷ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ - ನತಾಶಾ ವಿಚ್ಛೇದನ ಪಡೆದಿದ್ದು ಗೊತ್ತೇ ಇದೆ. ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ ಮಗ ಹುಟ್ಟಿದ ನಂತರ ಬೇರ್ಪಟ್ಟಿತ್ತು. ಇದೀಗ ಭಾರತದ ಮತ್ತೋರ್ವ ಕ್ರಿಕೆಟಿಗ ಪಾಂಡ್ಯ ಹಾದಿಯಲ್ಲೇ ಸಾಗುತ್ತಿರುವಂತೆ ಕಾಣುತ್ತಿದೆ.
ಹೌದು, ಭಾರತದ ಸ್ಟಾರ್ ಬೌಲರ್ ಯಜುವೇಂದ್ರ ಚಹಾಲ್ ಮತ್ತು ಪತ್ನಿ ಧನಶ್ರೀ ವರ್ಮಾ ವಿಚ್ಛೇದನ ಪಡೆಯಲು ತಯಾರಿ ನಡೆಸುತ್ತಿದ್ದಾರೆ ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ. ದಂಪತಿಗಳು ಈಗಾಗಲೇ ಇನ್‌ಸ್ಟಾದಲ್ಲಿ ಪರಸ್ಪರ ಅನ್‌ಫಾಲೋ ಮಾಡಿಕೊಂಡಿದ್ದಾರೆ. ಅಲ್ಲದೇ ಚಹಾಲ್ ಇತ್ತೀಚೆಗಷ್ಟೇ ತನ್ನ ಪತ್ನಿಯ ಫೋಟೋಗಳನ್ನು ಇನ್‌ಸ್ಟಾದಲ್ಲಿ ಡಿಲೀಟ್ ಮಾಡಿದ್ದಾರೆ. ಇದು ಊಹಾಪೋಹಗಳಿಗೆ ಪುಷ್ಠಿ ನೀಡಿದಂತಿದೆ. ಆದರೆ, ಧನಶ್ರೀ ಮಾತ್ರ ತಮ್ಮ ಖಾತೆಯಲ್ಲಿ ಚಹಾಲ್ ಜೊತೆಗಿರುವ ಫೋಟೋಗಳನ್ನು ಡಿಲೀಟ್ ಮಾಡಿಲ್ಲ.
ಮೂಲಗಳ ಪ್ರಕಾರ, ದಂಪತಿಗಳು ವಿಚ್ಛೇದನ ಪಡೆಯುವ ಸಾಧ್ಯತೆ ಇದೆ. ಆದರೆ, ಅಧಿಕೃತವಾಗಿ ಘೋಷಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಎನ್ನಲಾಗುತ್ತಿದೆ. ಆದರೆ, ಈ ಚಹಾಲ್ ದಂಪತಿ ಬೇರ್ಪಡುವಿಕೆಗೆ ನಿಖರವಾದ ಕಾರಣಗಳು ತಿಳಿದುಬಂದಿಲ್ಲ.