Ind vs Eng 2nd ODI: ಭಾರತ ಮತ್ತು ಇಂಗ್ಲೆಂಡ್ ನುಡವಿನ ಏರಡನೇ ಏಕದಿನ ಪಂದ್ಯ ಇಂದು ನಡೆಯುತ್ತಿದೆ. ಒಡಿಶಾದ ಬಾರಾಬತಿ ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿರುವ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ನಲ್ಲಿ 304 ರನ್ ಗಳಿಸಿ ಆಲೌಟ್ ಆಗಿದೆ. ಸದ್ಯ, ಈ ಗುರಿಯನ್ನು ಬೆನ್ನತ್ತಿರುವ ಭಾರತ 6 ಓವರ್ ಮುಕ್ತಾಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೇ 48 ರನ್ ಗಳಿಸಿದೆ.
ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಆರಂಭಿಕರಾಗಿ ಬ್ಯಾಟಿಂಗ್ಗೆ ಬಂದಿದ್ದಾರೆ. ಸತತ ಕಳಪೆ ಫಾರ್ಮ್ನಿಂದ ಕಂಗೆಟ್ಟಿದ್ದ ನಾಯಕ ರೋಹಿತ್ ಶರ್ಮಾ ಮತ್ತೆ ಲಯಕ್ಕೆ ಮರಳಿದಂತೆ ಕಾಣುತ್ತಿದೆ. ವೇಗದ ಬ್ಯಾಟಿಂಗ್ ಮೂಲಕ ಕೇವಲ 18 ಎಸೆತಗಳಲ್ಲಿ 1 ಬೌಂಡರಿ ಮತ್ತು 3 ಸಿಕ್ಸರ್ ಸಹಾಯದಿಂದ 29 ರನ್ ಗಳಿಸಿದ್ದಾರೆ. ಮತ್ತೊಂದು ಬದಿಯಲ್ಲಿ ಶುಭಮನ್ ಗಿಲ್ ಕೂಡ ರೋಹಿತ್ ಶರ್ಮಾಗೆ ಉತ್ತಮ ಸಾತ್ ನೀಡುತ್ತಿದ್ದಾರೆ. 19 ಎಸೆತಗಳನ್ನು ಎದುರಿಸಿ 3 ಬೌಂಡರಿ ಸಹಾಯದಿಂದ 17 ರನ್ ಕಲೆಹಾಕಿದ್ದಾರೆ.
ಏತನ್ಮಧ್ಯೆ, ಎರಡನೇ ಇನ್ನಿಂಗ್ಸ್ನಲ್ಲಿ ಭಾರತದ ಬ್ಯಾಟಿಂಗ್ ವೇಳೆ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು. 6.1 ಓವರ್ನಲ್ಲಿ ಪಂದ್ಯವನ್ನು ನಿಲ್ಲಿಸಲಾಗಿತ್ತು. ವಾಸ್ತವಾಗಿ ಮೈದಾನದಲ್ಲಿನ ಫ್ಲೆಡ್ಲೈಟ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಪಂದ್ಯದ ನಡುವೆಯೆ ಬಂದ್ ಆಗಿತ್ತು. ಸುಮಾರು 10 ನಿಮಿಷಗಳು ಕಳೆದರು ಲೈಟ್ ಸಮಸ್ಯೆ ಬಗೆಹರಿಯದ ಕಾರಣ ರೋಹಿತ್ ಶರ್ಮಾ, ಶುಭಮನ್ ಗಿಲ್ ಸೇರಿದಂತೆ ಇಂಗ್ಲೆಂಡ್ ಆಟಗಾರರು ಪೆವಿಲಿಯನ್ಗೆ ವಾಪಾಸ್ ಆಗಿದ್ದರು. 23 ನಿಮಿಷಗಳ ಬಳಿಕ ಫ್ಲೆಡ್ ಲೈಟ್ ಸರಿಪಡಿಸಲಾಗಿದೆ.