ಹಾಸನ:ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಸಂಬಂಧ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸೋಮವಾರ ಓಪನ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.
ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾದ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ, ಬೆದರಿಕೆ ಪ್ರಕರಣ ಸಂಬಂಧ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದರು. ಚಿತ್ರದುರ್ಗದ ಹಿರಿಯೂರಿನಲ್ಲಿ ವಶಕ್ಕೆ ಪಡೆದು, ತಡರಾತ್ರಿ ಹೊಳೆನರಸೀಪುರ ಪೊಲೀಸರಿಗೆ ಹಸ್ತಾಂತರ ಮಾಡಲಾಗಿತ್ತು. ಶನಿವಾರ ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು ದೇವರಾಜೇಗೌಡರನ್ನು ಪ್ರಿನ್ಸಿಪಲ್ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರ ಮನೆಯಲ್ಲಿ ಹಾಜರುಪಡಿಸಿದರು.