ಬೆಂಗಳೂರು: ಮುಂದಿನ ಮಾರ್ಚ್ವರೆಗೆ ಪ್ರತಿ ತಿಂಗಳು ರೂ. 2,400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಅವರ ಅಧ್ಯಕ್ಷತೆಯಲ್ಲಿ ನಡೆದ ನೋಂದಣಿ ಮತ್ತು ಮುದ್ರಾಂಕ ಇಲಾಖೆ 2024-25ರ ಸಾಲಿನ ರಾಜಸ್ವ ಸಂಗ್ರಹಣೆ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು. ನೋಂದಣಿ ಮತ್ತು ಮುದ್ರಾಂಕ ಇಲಾಖೆಯು 2024 - 25ರ ಸಾಲಿನಲ್ಲಿ ರೂ. 26,000 ಕೋಟಿ ರಾಜಸ್ವ ಸಂಗ್ರಹ ಗುರಿ ಹೊಂದಿದ್ದು, ಅಕ್ಟೋಬರ್ ತಿಂಗಳ ಅಂತ್ಯದವರೆಗೆ ರೂ.13,724 ಕೋಟಿ ಸಂಗ್ರಹ ಆಗಿದೆ.
ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಬೇಕು. ನೋಂದಣಿಯೇತರ ದಾಸ್ತಾವೇಜುಗಳಿಗೆ ಸರಿಯಾದ ಮುದ್ರಾಂಕ ಶುಲ್ಕವನ್ನು ಪಾವತಿಸಿಕೊoಡು ಹೆಚ್ಚಿನ ರಾಜಸ್ವ ಸಂಗ್ರಹಿಸಬೇಕು ಎನ್ನುವ ಸೂಚನೆ ನೀಡಿದರು.