ಕರ್ನಾಟಕ

karnataka

ETV Bharat / state

402 ಪಿಎಸ್ಐ ನೇಮಕಾತಿ ಅಂತಿಮ ಫಲಿತಾಂಶ ಪ್ರಕಟಿಸಿದ ಕೆಇಎ - PSI RECRUITMENT FINAL RESULT

402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ.

kea
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ETV Bharat)

By ETV Bharat Karnataka Team

Published : Nov 14, 2024, 9:59 PM IST

ಬೆಂಗಳೂರು:402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ತನ್ನ ವೆಬ್​ಸೈಟ್​​ನಲ್ಲಿ ಪ್ರಕಟಿಸಿದೆ.

ಅಕ್ಟೋಬರ್ 3ರಂದು ನಡೆದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಅಂತಿಮವಾಗಿ ಪಡೆದ ಅಂಕಗಳ ವಿವರಗಳನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯನ್ನು ನೇಮಕಾತಿ ವಿಭಾಗದ ಪೊಲೀಸ್ ಮಹಾನಿರ್ದೇಶಕರಿಗೆ ಹಸ್ತಾಂತರಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ತಾತ್ಕಾಲಿಕ ಅಂಕಪಟ್ಟಿಗೆ ಬಂದ ಎಲ್ಲ ಆಕ್ಷೇಪಣೆಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ. ಈಗಾಗಲೇ ಅಭ್ಯರ್ಥಿಗಳು ಪಡೆದಿರುವ ಅಂಕಗಳಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪತ್ರಿಕೆ-1ಕ್ಕೆ 313 ಹಾಗೂ ಪತ್ರಿಕೆ-2ಕ್ಕೆ 219 ಆಕ್ಷೇಪಣೆಗಳು ಸ್ವೀಕೃತವಾಗಿದ್ದವು. ಪತ್ರಿಕೆ-1ರ ಉತ್ತರ ಪತ್ರಿಕೆಗಳನ್ನು ನಿಯಮ ಪ್ರಕಾರ ಒಂದು ಮತ್ತು ಎರಡನೇ ಮೌಲ್ಯಮಾಪನಕ್ಕೆ ಒಳಪಡಿಸಲಾಗಿದೆ. ಈ ಎರಡೂ ಮೌಲ್ಯಮಾಪನದ ಸಂದರ್ಭದಲ್ಲಿ 8 ಅಥವಾ 8ಕ್ಕಿಂತ ಹೆಚ್ಚಿನ ಅಂಕಗಳ ವ್ಯತ್ಯಾಸ ಕಂಡುಬಂದಲ್ಲಿ ಅಂತಹ ಉತ್ತರ ಪತ್ರಿಕೆಗಳನ್ನು 3ನೇ ಮೌಲ್ಯಮಾಪನ ಮಾಡಿಸಲಾಗಿದೆ. ಆಕ್ಷೇಪಣೆ ಬಂದ ಮೇಲೆ ಇವುಗಳನ್ನು ಮತ್ತೊಮ್ಮೆ ಪರಿಶೀಲಿಸಿದ್ದು, ಈಗಾಗಲೇ ಈ ಅಭ್ಯರ್ಥಿಗಳು ಪಡೆದಿರುವುದಾಗಿ ಪ್ರಕಟಿಸಿರುವ ಅಂಕಗಳಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ ಎಂದಿದ್ದಾರೆ.

ಹಾಗೆಯೇ, ಪತ್ರಿಕೆ-2ರ ಒ.ಎಂ.ಆರ್ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಿದ್ದು, ಅಲ್ಲಿಯೂ ವ್ಯತ್ಯಾಸ ಕಂಡುಬಂದಿಲ್ಲ. ಹೀಗಾಗಿ, ಈ ಆಕ್ಷೇಪಣೆಗಳನ್ನು ಪುರಸ್ಕರಿಸಲು ಅವಕಾಶ ಇಲ್ಲ ಎಂದು ತೀರ್ಮಾನಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:2025 ಸಾಲಿನಲ್ಲಿ 19 ಸಾರ್ವತ್ರಿಕ ರಜೆ, 20 ಪರಿಮಿತ ರಜೆ: ಹೀಗಿದೆ ರಜಾ ದಿನಗಳ ಸಂಪೂರ್ಣ ವಿವರ​

ABOUT THE AUTHOR

...view details